ಶಿವರಾಜ್ ಕುಮಾರ್ 'ಶಿವಪ್ಪ' ಸಿನಿಮಾದ ಟೈಟಲ್ ಬದಲಾವಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಿವಪ್ಪ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ನಡುವೆ ಶಿವಪ್ಪ ಸಿನಿಮಾದ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ.

ನಿರ್ದೇಶಕ ವಿಜಯ್ ಮಿಲ್ಟನ್ ಸಾರಥ್ಯದಲ್ಲಿ ಮೂಡಬಿರುತ್ತಿರುವ ಶಿವಪ್ಪ ಸಿನಿಮಾದ ಟೈಟಲ್ ಬದಲಾವಣೆ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ. ಈ ಬಗ್ಗೆ ಸ್ವತಃ ಶಿವಣ್ಣ ಟಿವಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಶಿವಪ್ಪ ಸಿನಿಮಾಗೆ ಹೊಸ ಶೀರ್ಷಿಕೆ ಇಡುವುದಾಗಿ ಬಹಿರಂಗ ಪಡಿಸಿದ್ದಾರೆ.

ಆದರೆ ಟೈಟಲ್ ಏನು ಇನ್ನುವುದು ಇನ್ನು ರಿವೀಲ್ ಆಗಿಲ್ಲ. ಈ ಸಿನಿಮಾ ಸ್ವಲ್ಪ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಮೂಡಿಬರುತ್ತಿದೆ. ಶಿವರಾಜ್ ಕುಮಾರ್ ಸಖತ್ ರಗಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಭಜರಂಗಿ-2 ಸಿವಿಮಾದ ಚಿತ್ರೀಕರಣ ಮುಗಿಸಿರುವ ಶಿವಣ್ಣ ಸದ್ಯ ಶಿವಪ್ಪ ಚಿತ್ರೀಕರಣದಲ್ಲಿದ್ದಾರೆ.

 Shivaraj Kumar starrer Shivappa movie gets new title

ಚಿತ್ರದಲ್ಲಿ ದಿಯಾ ಖ್ಯಾತಿ ಪೃಥ್ವಿ ಅಂಬರ್, ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ವಿಶೇಷ ಎಂದರೆ ಹಿರಿಯ ನಟ ಶಿಶಿಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಟಗರು ಸಿನಿಮಾದ ಬಳಿಕ ಧನಂಜಯ್ ಮತ್ತೆ ಶಿವರಾಜ್ ಕುಮಾರ್ ಜೊತೆ ನಟಿಸುತ್ತಿದ್ದಾರೆ.

ಇನ್ನು ಇತ್ತೀಚಿಗಷ್ಟೆ ಶಿವಣ್ಣ 125ನೇ ಸಿನಿಮಾ ಅನೌನ್ಸ್ ಮಾಡಿದ್ದು, ವೇದ ಎಂದು ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ ಎ ಹರ್ಷ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಶಿವಣ್ಣ ಕೊನೆಯದಾಗಿ ದ್ರೋಣ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇದೀಗ ಭಜರಂಗಿ-2 ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಆದರೆ ಕೊರೊನಾ ಹಾವಳಿಯಿಂದ ಸಿನಿಮಾ ರಿಲೀಸ್ ತಡವಾಗುವ ಸಾದ್ಯತೆ ಇದೆ.

More from Filmibeat

English summary
Shivaraj Kumar starrer Shivappa movie gets new title.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X