For Quick Alerts
  ALLOW NOTIFICATIONS  
  For Daily Alerts

  ಕಿರೀಟಿ ರೆಡ್ಡಿ ಶೂಟಿಂಗ್ ಸೆಟ್‌ಗೆ ಶಿವಣ್ಣ ಸರ್ಪ್ರೈಸ್ ವಿಸಿಟ್!

  |

  ಕನ್ನಡ ಚಿತ್ರರಂಗಕ್ಕೆ ಜನಾರ್ಧನ ರೆಡ್ಡಿ ಪುತ್ರ, ಕಿರೀಟಿ ರೆಡ್ಡಿ ಎಂಟ್ರಿ ಕೊಡ್ತಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತ ನೆರವೇರಿದೆ. ಚಿತ್ರದ ಶೂಟಿಂಗ್ ಕೂಡ ಆರಂಭ ಆಗಿದೆ. ಈ ಚಿತ್ರದಲ್ಲಿ ನಟಿ ಶ್ರೀ ಲೀಲಾ, ಕಿರೀಟಿ ರೆಡ್ಡಿ ಜೊತೆಗೆ ನಟಿಸುತ್ತಿದ್ದಾರೆ.

  ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

  ಕಿರೀಟಿ ರೆಡ್ಡಿ: ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸಾಹಸಕ್ಕೆ ಭೇಷ್ ಎಂದ ನೆಟ್ಟಿಗರುಕಿರೀಟಿ ರೆಡ್ಡಿ: ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸಾಹಸಕ್ಕೆ ಭೇಷ್ ಎಂದ ನೆಟ್ಟಿಗರು

  ಅದ್ಧೂರಿಯಾಗಿ ಮುಹೂರ್ತದ ಬಳಿಕ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದ ಚಿತ್ರತಂಡ ಬ್ರೇಕ್ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

  ಈ ಶೂಟಿಂಗ್ ಸೆಟ್‌ಗೆ ನಟ ಶಿವರಾಜ್ ಕುಮಾರ್ ಸರ್ಪ್ರೈಸ್ ಆಗಿ ವಿಸಿಟ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಅಲ್ಲಿಯೇ ಕೆಲ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಡೀ ತಂಡ ಹಾಗೂ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು.

  Shivaraj Kumar Visit Kireeti Reddy Debut Film Shootinig Spot And Wish Him.

  ಹೆಸರಿಡದ ಕಿರೀಟಿ ಚೊಚ್ಚಲ ಸಿನಿಮಾದ ಟೈಟಲ್ ಅನಾವರಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 29ಕ್ಕೆ ಕಿರೀಟಿ ಹುಟ್ಟುಹಬ್ಬವಿದೆ. ಈ ದಿನದಂದೂ ಟೈಟಲ್ ರಿವೀಲ್ ವಿಡಿಯೋ ಝಲಕ್ ರಿಲೀಸ್ ಮಾಡಲು ಯೋಜನೆ ಹಾಕಿಕೊಂಡಿದೆ. ಸದ್ಯ ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡುತ್ತಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

  English summary
  Shivaraj Kumar Visit Kireeti Reddy Debut Film Shootinig Spot And Wish Him, Know More,
  Saturday, September 3, 2022, 16:44
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X