For Quick Alerts
  ALLOW NOTIFICATIONS  
  For Daily Alerts

  'ಅವನೇ ಶ್ರೀಮನ್ನಾರಾಯಣ'ನ ಜೊತೆಗೆ ಶಿವರಾಜ್ ಕುಮಾರ್

  By Naveen
  |
  ಅವನೇ ಶ್ರೀಮನ್ನಾರಾಯಣ ಸೆಟ್‌ನಲ್ಲಿ ಶಿವಣ್ಣ ಪ್ರತ್ಯಕ್ಷ..!! | Filmibeat Kannada

  ನಟ ರಕ್ಷಿತ್ ಶೆಟ್ಟಿ 'ಕಿರಿಕ್ ಪಾರ್ಟಿ' ಸಿನಿಮಾದ ನಂತರ ಕೈಗೆತ್ತಿಕೊಂಡ ಸಿನಿಮಾ 'ಅವನೇ ಶ್ರೀಮನ್ನಾರಾಯಣ'. ಮಾರ್ಚ್ ತಿಂಗಳಿನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಚಿತ್ರೀಕರಣ ಈಗ ಭರ್ಜರಿಯಾಗಿ ನಡೆಯುತ್ತಿದೆ.

  ಅಂದಹಾಗೆ, ಸದ್ಯ ಈ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ನಟ ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. 'ಅವನೇ ಶ್ರೀಮನ್ನಾರಾಯಣ' ಚಿತ್ರದ ಚಿತ್ರೀಕರಣವನ್ನು ನೋಡಲು ಶಿವಣ್ಣ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಸಿನಿಮಾದ ಕೆಲವು ತುಣುಕುಗಳನ್ನು ರಕ್ಷಿತ್ ತೋರಿಸಿದ್ದಾರೆ. ಶಿವಣ್ಣನ ಫೋಟೋಗಳನ್ನು ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಇತ್ತೀಚಿಗಷ್ಟೆ 'ಕಿಸ್' ಸಿನಿಮಾದ ಶೂಟಿಂಗ್ ಸೆಟ್ ಗೆ ಸಹ ಶಿವರಾಜ್ ಕುಮಾರ್ ಭೇಟಿ ನೀಡಿದ್ದರು.

  'ಅವನೇ ಶ್ರೀಮನ್ನಾರಾಯಣ' ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮೊದಲ ಬಾರಿಗೆ ಪೊಲೀಸ್ ಆಫೀಸರ್ ಪಾತ್ರವನ್ನು ಮಾಡುತ್ತಿದ್ದಾರೆ. ಸಚಿನ್ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಜೊತೆಗೆ ಶಾನ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ, ರಕ್ಷಿತ್ ಇಲ್ಲಿ ಐದು ಬೇರೆ ಬೇರೆ ಗೆಟಪ್ ಗಳಲ್ಲಿ ಮಿಂಚಲಿದ್ದಾರೆ.

  ಈಗಾಗಲೇ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹಿಟ್ ಆಗಿದೆ. ಟೀಸರ್ ಗೆ ದೊಡ್ಡ ಮಟ್ಟದ ಪ್ರತಿಕ್ರಿಯೆ ಸಿಕ್ಕಿದೆ. ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ.

  English summary
  Kannada actor Shivaraj Kumar visited Rakshit shetty and Shanvi Srivastava's 'Avane srimannarayana' movie shooting set.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X