»   » ಅಪ್ಪು ನಿರ್ಮಾಣದ ಮೊದಲ ಸಿನಿಮಾಗೆ ಕ್ಲಾಪ್ ಮಾಡಿದ ಶಿವಣ್ಣ

ಅಪ್ಪು ನಿರ್ಮಾಣದ ಮೊದಲ ಸಿನಿಮಾಗೆ ಕ್ಲಾಪ್ ಮಾಡಿದ ಶಿವಣ್ಣ

Posted By:
Subscribe to Filmibeat Kannada

ಪುನೀತ್ ರಾಜ್ ಕುಮಾರ್ ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾ 'ಕವಲುದಾರಿ'. ಸ್ಯಾಂಡಲ್ ವುಡ್ ಅಂಗಳದಲ್ಲಿ ದೊಡ್ಡ ಸುದ್ದಿ ಮಾಡುತ್ತಿರುವ ಈ ಚಿತ್ರದ ಮುಹೂರ್ತ ಇಂದು ನೆರವೇರಿತು.

'ಕವಲುದಾರಿ' ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಆಗಮಿಸಿದ್ದರು. ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಮ್ಮನ ಮೊದಲ ನಿರ್ಮಾಣದ ಚಿತ್ರಕ್ಕೆ ಶುಭ ಕೋರಿದರು ಶಿವಣ್ಣ. ನಟ ರಕ್ಷಿತ್ ಶೆಟ್ಟಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Shivarajkumar Clap For Puneeth's 'Kavaludari' movie.

ಅಂದಹಾಗೆ, ಮುಹೂರ್ತದ ದಿನ ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ನಾಯಕ ರಿಷಿ ಕೆ.ಎಸ್.ಶ್ಯಾಮ್ ಎಂಬ ಪೊಲೀಸ್ ಅಧಿಕಾರಿಯಾಗಿ ಖದರ್ ಆಗಿ ಪೋಸ್ ಕೊಟ್ಟಿದ್ದಾರೆ. ಇನ್ನು 'ಗೋಧಿ ಬಣ್ಣ ಸಾಧಾರಣ ಮೈ ಕಟ್ಟು' ಖ್ಯಾತಿಯ ನಿರ್ದೇಶಕಹೇಮಂತ್ ರಾವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Shivarajkumar Clap For Puneeth's 'Kavaludari' movie.

ಪುನೀತ್ ತಮ್ಮ 'PRK' ಪ್ರೊಡಕ್ಷನ್ ನಲ್ಲಿ 'ಕವಲು ದಾರಿ' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಹಿರಿಯ ನಟ ಅನಂತ್ ನಾಗ್ ಸಿನಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ನಾಯಕಿಯಾಗಿ ರೋಶಿನಿ ಪ್ರಕಾಶ್ ಆಯ್ಕೆ ಆಗಿದ್ದಾರೆ.

English summary
Shivarajkumar Claps For Puneeth Rajkumar's 'Kavaludari' movie.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada