ಸಿನಿಮಾ ನಿರ್ಮಾಣಕ್ಕಿಳಿದ ಶಿವಣ್ಣನ ಪುತ್ರಿ ನಿವೇದಿತಾ: ಮೊದಲ ಸಿನಿಮಾ ಹೆಸರೇನು?
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ ಜೊತೆ ಜೊತೆಗೆ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಅವರ ನಿರ್ಮಾಣ ಸಂಸ್ಥೆಯಲ್ಲಿ ಇತ್ತೀಚೆಗೆ 'ವೇದ' ಸಿನಿಮಾ ತೆರೆಕಂಡು ಯಶಸ್ವಿಯಾಗಿತ್ತು. ಇದೇ ಬೆನ್ನಲ್ಲೇ ಮತ್ತಷ್ಟು ಸಿನಿಮಾ ನಿರ್ಮಾಣ ಮಾಡುವ ಉತ್ಸಾಹದಲ್ಲಿದ್ದಾರೆ.
'ವೇದ' ಸಿನಿಮಾವನ್ನು ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡಿದ್ದರು. ಸಿನಿಮಾ ರಿಲೀಸ್ ಆದ ವೇಳೆ ಶಿವಣ್ಣ ತಮ್ಮ ಪುತ್ರಿ ಕೂಡ ಸಿನಿಮಾ ನಿರ್ಮಾಣಕ್ಕೆ ಇಳಿಯುವ ಬಗ್ಗೆ ಸುಳಿವು ಕೊಟ್ಟಿದ್ದರು. ಅದರಂತೆ ದ್ವಿತೀಯ ನಿವೇದಿತಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.
ಶ್ರೀ ಮುತ್ತು ಸಿನಿ ಸರ್ವಿಸ್ ಮೂಲಕ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ ಇಳಿದ್ದಾರೆ. ಈಗಾಗಲೇ ಸಿನಿಮಾವನ್ನು ಅನೌನ್ಸ್ ಕೂಡ ಮಾಡಿದ್ದಾರೆ. ಈ ಕನಸಿನ ಕೂಸನ್ನು ಯಶಸ್ಸುಗೊಳಿಸ ಪಣತೊಟ್ಟಿದ್ದಾರೆ. ಅಂದ್ಹಾಗೆ ನಿರ್ಮಾಣದಲ್ಲಿ ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ಕಲ್ಪಿಸಿಕೊಡಲು ನಿರ್ಧರಿಸಿದ್ದಾರೆ.
ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆಯಡಿ ಈಗಾಗಲೇ ಧಾರಾವಾಹಿ ಹಾಗೂ ಮೂರು ವೆಬ್ ಸೀರೀಸ್‌ಗಳು ರಿಲೀಸ್ ಆಗಿವೆ. ಈಗ ಇದೇ ಬ್ಯಾನರ್‌ನಿಂದ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮೇ 1ರಂದು ಒಂದು ಹೊಸ ಸಿನಿಮಾ ಪೋಸ್ಟರ್ ಹಾಗೂ ತಂಡವನ್ನು ಪರಿಚಯಿಸಿದೆ.
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾಗೆ ವಂಶಿ ನಿರ್ದೇಶಕ. ಈಗಾಗಲೇ ಕೆಲವು ಕಿರುಚಿತ್ರ ನಿರ್ದೇಶಿಸಿ, PRK ನಿರ್ಮಾಣ ಸಂಸ್ಥೆಯಡಿ ನಿರ್ಮಾಣ ಆಗಿದ್ದ 'ಮಯಾಬಜಾರ್' ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಇತ್ತೀಚೆಗೆ ರಿಲೀಸ್ ಆದ 'ಪೆಂಟಗನ್'ನ ಐದು ಕಥೆಗಳಲ್ಲಿ ಕಿರಣ್ ಕುಮಾರ್ ನಿರ್ದೇಶಕದ ಸ್ಟೋರಿಯಲ್ಲಿ ಪ್ರಮುಖ ಪಾತ್ರವಾಗಿ ನಟಿಸಿದ್ದರು.

ವಂಶಿ ನಿರ್ದೇಶಕ ಹಾಗೂ ನಟರಾಗಿ ನಟಿಸುತ್ತಿದ್ದಾರೆ. ಇದೊಂದು ಲೈಫ್ ಡ್ರಾಮಾ ಕಥೆಯುಳ್ಳ ಸಿನಿಮಾ. ಈ ಸಿನಿಮಾಗೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಬಾನ ದಾರಿಯಲಿ' ಸಿನಿಮಾದ ಅಭಿಲಾಷ್ ಕಲ್ಲಟ್ಟಿ ಕ್ಯಾಮೆರಾ ಸೆರೆಹಿಡಿಯಲಿದ್ದು, ಚರಣ್ ರಾಜ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಇದೆ.


Click it and Unblock the Notifications











