'ರುಸ್ತುಂ' ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ಸಿನಿಮಾ 'ರುಸ್ತುಂ'. ಟ್ರೈಲರ್ ಮತ್ತು ಹಾಡುಗಳ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ 'ರುಸ್ತುಂ' ಇದೆ ತಿಂಗಳು 14ಕ್ಕೆ ತೆರೆಗೆ ಬರಲು ಸಿದ್ಧವಾಗಿತ್ತು. ಆದ್ರೀಗ ಚಿತ್ರ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

'ರುಸ್ತುಂ' ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿರುವ ರವಿ ವರ್ಮ ಸದ್ಯ ರಿಲೀಸ್ ಆಗಿರುವ ಟ್ರೈಲರ್ ಮೂಲಕವೆ ನಿರೀಕ್ಷೆ ಹೆಚ್ಚಿಸಿದ್ದಾರೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ 'ರುಸ್ತುಂ' ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

ವಿಶೇಷ ಅಂದ್ರೆ ಈ ಸಿನಿಮಾ ಜೂನ್ 14ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ರಿಲೀಸ್ ದಿನವೆ ತೆರೆಗೆ ಬರುತ್ತೆ ಅಂತ ಹೇಳಲಾಗುತ್ತಿತ್ತು. ಆದ್ರೀಗ ಚಿತ್ರ ಈ ತಿಂಗಳ ಕೊನೆಗೆ ಅಂದ್ರೆ ಜೂನ್ 28ಕ್ಕೆ ರಿಲೀಸ್ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

Shivarajkumar starrer Rustum Kannada movie release date postponed

ಇಬ್ಬರು ಸ್ಟಾರ್ ನಟರ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗುತ್ತಿರುವುದರಿಂದ ಬಾಕ್ಸ್ ಆಫೀಸ್ ಕ್ಲ್ಯಾಶ್ ಆಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೀಗ 'ರುಸ್ತುಂ' ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಆದ್ರೆ ಈ ಬಗ್ಗೆ ಚಿತ್ರತಂಡ ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

More from Filmibeat

English summary
Kannada actor Shivarajkumar starrer Rustum Kannada movie release date postponed. Ravi varma directorial Rustom all set to release in june 28th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X