ಶಿವಣ್ಣ ಸಿಕ್ಸ್ ಪ್ಯಾಕ್ 'ಭಜರಂಗಿ' ಶೂಟಿಂಗ್ ಡೀಟೇಲ್ಸ್

By Rajendra

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ 'ಭಜರಂಗಿ' ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಮೂವತ್ತು ದಿನಗಳ ಕಾಲ ಮೂರನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೆ ಚಿತ್ರಕ್ಕೆ ಹೈದರಾಬಾದಿನಲ್ಲಿ ಚಿತ್ರೀಕರಣ ನಡೆದಿದೆ.

ಎ.ಹರ್ಷ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದ, ಶಕ್ತಿ ಅವರೊಡನೆ ಚಿತ್ರಕಥೆ ಬರೆದಿರುವ ಹರ್ಷ ಈ ಚಿತ್ರದ ನೃತ್ಯ ನಿರ್ದೇಶಕರೂ ಹೌದು. ಫಿಲಂ ಎಂಟರ್ ಟೈನರ್ ಲಾಂಛನದಲ್ಲಿ ನಟರಾಜ್ ಗೌಡ ಹಾಗೂ ಮಂಜು (ಜಾಕ್) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಜೈ ಆನಂದ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. ದೀಪು.ಎಸ್.ಕುಮಾರ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರಮೇಶ್ ಅವರ ನಿರ್ಮಾಣ ನಿರ್ವಹಣೆಯಿದೆ.

ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಐಂದ್ರಿತಾ ರೇ, ಊರ್ವಶಿ, ಬುಲೆಟ್ ಪ್ರಕಾಶ್, ಸಾಧುಕೋಕಿಲಾ, ತಬಲನಾಣಿ, ಹೊನ್ನವಳ್ಳಿ ಕೃಷ್ಣ, ಶಿವರಾಂ, ಎಂ.ಎಸ್.ಉಮೇಶ್, ಬಿರಾದಾರ್, ಚಿಕ್ಕಣ್ಣ, ಎಂ.ಎನ್.ಲಕ್ಷ್ಮೀದೇವಿ, ಶ್ರುತಿ, ಸಿಲ್ಲಿಲಲ್ಲಿ ಆನಂದ್ ಹಾಗೂ ರಂಗಭೂಮಿ ಕಲಾವಿದರಾದ ಲೋಕಿ, ರಾಜಕುಮಾರ್, ಮಧು, ಚೇತನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)

More from Filmibeat

English summary
Century Star Shivarajkumar and Aindrita Ray starrer 'Bhajarangi' directed by A. Harsha brisk progress in Bangalore. Arjun Janya is the music director and Jai Anand is the cinematographer of the film. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X