»   » 'ಭಜರಂಗಿ' ಟ್ರೇಲರ್ ರಿಲೀಸ್ ಗೆ ಮುಹೂರ್ತ ಫಿಕ್ಸ್

'ಭಜರಂಗಿ' ಟ್ರೇಲರ್ ರಿಲೀಸ್ ಗೆ ಮುಹೂರ್ತ ಫಿಕ್ಸ್

Posted By:
Subscribe to Filmibeat Kannada

ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಭಜರಂಗಿ ಚಿತ್ರ ಹಲವಾರು ವಿಶೇಷಗಳಿಂದ ಕೂಡಿರುವುದು ಗೊತ್ತೇ ಇದೆ. ಈ ಚಿತ್ರದಲ್ಲಿ ಶಿವಣ್ಣ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸುತ್ತಿದ್ದಾರೆ. ಬುಧವಾರ (ಸೆ.18) ಚಿತ್ರದ ಟ್ರೇಲರ್ ಸೆನ್ಸಾರ್ ಮಂಡಲಿಯಲ್ಲಿ ಪಾಸಾಗಿದೆ.

ಒಟ್ಟು 90 ಸೆಕೆಂಡ್ ಗಳ ಕಾಲಾವಧಿಯ ಈ ಟ್ರೇಲರ್ ಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಸೆಪ್ಟೆಂಬರ್ 26ರಂದು ಟ್ರೇಲರನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಎ ಹರ್ಷಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದ ಬಗ್ಗೆ ಶಿವಣ್ಣ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದಾರೆ.


ಭಜರಂಗಿ ಚಿತ್ರದ ಪೋಸ್ಟರ್ ಗಳು ಈಗಾಗಲೆ ಸಾಕಷ್ಟು ಹವಾ ಎಬ್ಬಿಸಿವೆ. ಈಗ ಸೆನ್ಸಾರ್ ಮಂಡಳಿ ಚಿತ್ರದ ಟ್ರೇಲರ್ ಗೆ ಯು/ಎ ಸರ್ಟಿಫಿಕೇಟ್ ನೀಡಿದ್ದು 13 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವರು ಪೋಷಕರ ಮಾರ್ಗದರ್ಶನದಲ್ಲಿ ಇದನ್ನು ವೀಕ್ಷಿಸಬಹುದಾಗಿದೆ.

ಇನ್ನು ಚಿತ್ರವನ್ನು ನವೆಂಬರ್ 1ರ ರಾಜ್ಯೋತ್ಸವದಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಎ.ಹರ್ಷ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದ, ಶಕ್ತಿ ಅವರೊಡನೆ ಚಿತ್ರಕಥೆ ಬರೆದಿರುವ ಹರ್ಷ ಈ ಚಿತ್ರದ ನೃತ್ಯ ನಿರ್ದೇಶಕರೂ ಹೌದು. ಫಿಲಂ ಎಂಟರ್ ಟೈನರ್ ಲಾಂಛನದಲ್ಲಿ ನಟರಾಜ್ ಗೌಡ ಹಾಗೂ ಮಂಜು(ಜಾಕ್) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಜೈಆನಂದ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ನೀಡಿದ್ದಾರೆ. ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. ದೀಪು.ಎಸ್.ಕುಮಾರ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರಮೇಶ್ ಅವರ ನಿರ್ಮಾಣ ನಿರ್ವಹಣೆಯಿರುದೆ.

ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಐಂದ್ರಿತಾ ರೇ, ಊರ್ವಶಿ, ಬುಲೆಟ್ ಪ್ರಕಾಶ್, ಸಾಧುಕೋಕಿಲಾ, ತಬಲನಾಣಿ, ಹೊನ್ನವಳ್ಳಿ ಕೃಷ್ಣ, ಶಿವರಾಂ, ಎಂ.ಎಸ್.ಉಮೇಶ್, ಬಿರಾದಾರ್, ಚಿಕ್ಕಣ್ಣ, ಎಂ.ಎನ್.ಲಕ್ಷ್ಮೀದೇವಿ, ಶ್ರುತಿ, ಸಿಲ್ಲಿಲಲ್ಲಿ ಆನಂದ್ ಹಾಗೂ ರಂಗಭೂಮಿ ಕಲಾವಿದರಾದ ಲೋಕಿ, ರಾಜಕುಮಾರ್, ಮಧು, ಚೇತನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)

English summary
Hat trick hero Shivrajkumar lead Bhajarangi trailer will be officially launched on September 26. Recently the 90 seconds trailer gets U/A certificate from regional censor board. The movie is slated for release on 1st November, the day of Kannada Rajyotsava celebration.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada