For Quick Alerts
  ALLOW NOTIFICATIONS  
  For Daily Alerts

  'ಲೀಡರ್' ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

  By Bharathkumar
  |

  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಲೀಡರ್' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮೊದಲ ಹಂತದ ಶೂಟಿಂಗ್ ಕಂಪ್ಲೀಟ್ ಆಗಿದೆ.

  ಸತತ 20 ದಿನಗಳ ಕಾಲ ಬೆಂಗಳೂರಿನ ಸುತ್ತಾ ಮುತ್ತಾ ಚಿತ್ರೀಕರಣ ಮುಗಿಸಿರುವ 'ಲೀಡರ್' ಡಿಸೆಂಬರ್ 2 ರಿಂದ ಎರಡನೇ ಹಂತದ ಚಿತ್ರೀಕರಣ ಶುರು ಮಾಡಲಿದೆ.

  'ಲೀಡರ್' ಚಿತ್ರಕ್ಕೆ 'ರೋಸ್' ಖ್ಯಾತಿಯ ನಿರ್ದೇಶಕ ಸಹನಾ ಮೂರ್ತಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಾರ್ದಿಕ್ ತರುಣ್ ಕಂಬೈನ್ಸ್ ಲಾಂಚನದಲ್ಲಿ ತರುಣ್ ಶಿವಪ್ಪ ಹಾಗೂ ಹಾರ್ದಿಕ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಮತ್ತು ಗುರು ಪ್ರಶಾಂತ್ ಛಾಯಾಗ್ರಹಣವಿದೆ.[ಡಾ.ಶಿವಣ್ಣ ಈಗ 'ದಿ ಲಿಡರ್' ಆಫ್ ಸ್ಯಾಂಡಲ್ ವುಡ್]

  Shivrajkumar's 'Leader' Complete First Schedule Shooting

  ಅಂದ್ಹಾಗೆ, 'ಲೀಡರ್' ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗವಿದೆ. ಶಿವಣ್ಣನ ಜೊತೆಯಲ್ಲಿ ನಟ ವಿಜಯ್ ರಾಘವೇಂದ್ರ, ಗುರು ಜಗ್ಗೇಶ್, ವಂಶಿ ಕೃಷ್ಣ ಹಾಗೂ ಲೂಸ್ ಮಾದ ಯೋಗೇಶ್ ಸೇರಿದಂತೆ ಹಲವರು ಅಭಿನಯಿಸುತ್ತಿದ್ದಾರೆ.

  ವಿಶೇಷ ಅಂದ್ರೆ 'ಲೀಡರ್' ಚಿತ್ರದಲ್ಲಿ ಲೂಸ್ ಮಾದ ಯೋಗೇಶ್ ವಿಲನ್ ಪಾತ್ರ ಮಾಡುತ್ತಿದ್ದಾರಂತೆ.[ಶಿವಣ್ಣನ 'ಲೀಡರ್' ಚಿತ್ರದ ಫಸ್ಟ್‌ ಲುಕ್ ರಿಲೀಸ್]

  ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ 'ಪ್ರಣೀತಾ ಸುಭಾಶ್' ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಇನ್ನೂ ಶ್ರೀನಗರ ಕಿಟ್ಟಿ-ಭಾವನಾ ದಂಪತಿಯ ಪುತ್ರಿ ಪರಿಣಿತಾ, ಶಿವಣ್ಣನ ಮಗಳ ಪಾತ್ರ ನಿರ್ವಹಿಸುತ್ತಿರುವುದು ಚಿತ್ರದ ಮತ್ತೊಂದು ವಿಶೇಷ.[ಶಿವಣ್ಣ 'ಲೀಡರ್' ಆದರು.! ಅವರಿಗೆ 'ನಾಯಕಿ' ಯಾರು.?]

  English summary
  Kannada Actor Shiva Rajkumar Starrer Kannada Movie 'Leader' complete the first schedule shooting in bangalore. The movie features Pranitha, Deepika Kamaiah, Vijay Raghavendra, Yogesh and is directed by Sahana Murthy of 'Rose' fame.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X