For Quick Alerts
  ALLOW NOTIFICATIONS  
  For Daily Alerts

  ಸಿನಿ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಿದ್ದರಾಮಯ್ಯ, ಜಮೀರ್ ಅಹ್ಮದ್

  |

  ಕೊರೊನಾ ವೈರಸ್‌ ಬಿಕ್ಕಟ್ಟಿನಿಂದ ಚಿತ್ರರಂಗದ ಅನೇಕ ಕಲಾವಿದರು, ಸಿನಿಮಾ ಕಾರ್ಮಿಕರು, ತಂತ್ರಜ್ಞರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುಟುಂಬಗಳಿಗೆ ಚಿತ್ರರಂಗದಿಂದ ಹಲವರು ಸಹಾಯ ಮಾಡ್ತಿದ್ದಾರೆ. ಇದೀಗ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕಲಾವಿದ ಹಾಗೂ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ.

  ಚಿತ್ರರಂಗದ ಬೆನ್ನಿಗೆ ನಿಂತ Siddaramaiah | Zameer Ahmed Khan | Filmibeat Kannada

  ಬೆಂಗಳೂರಿನಲ್ಲಿ ಸಿನಿ ಕಲಾವಿದರು ಹಾಗೂ ಕಾರ್ಮಿಕರಿಗೆ ಉಚಿತ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮ ಆಯೋಜಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಟ್‌ಗಳನ್ನು ವಿತರಿಸಿದರು. ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ, ಶಾಸಕರಾದ ಬೈರತಿ ಸುರೇಶ್, ಪ್ರಕಾಶ್ ರಾಥೋಡ್ ಹಾಜರಿದ್ದರು.

  ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ

  ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ 'ಕೋವಿಡ್ ನಿಂದ ಹಲವರು ಸಂಕಷ್ಟಕ್ಕೊಳಗಾಗಿದ್ದಾರೆ. ಅಸಂಘಟಿತ ಕಾರ್ಮಿಕರ ನೆರವಿಗೆ ಸರ್ಕಾರ ಬಂದಿಲ್ಲ. ಜಮೀರ್ ಅಹ್ಮದ್ ಈಗ ನೆರವಿಗೆ ಬಂದಿದ್ದು, ಕಲಾವಿದರಿಗೆ ಫುಡ್ ಕಿಟ್ ವಿತರಿಸುತ್ತಿದ್ದಾರೆ. ಪತ್ರಿಕಾ ವಿತರಕರಿಗೂ ಸರ್ಕಾರ ಸಹಾಯ ಮಾಡಬೇಕು' ಎಂದು ತಿಳಿಸಿದರು.

  'ಕಳೆದ ಭಾರಿ ಸರ್ಕಾರ ನೆರವು ಘೋಷಿಸಿತ್ತು. ಆದರೆ ಆಗ ಸಹಾಯ ಸರಿಯಾಗಿ ತಲುಪಲಿಲ್ಲ. ತಮಿಳುನಾಡಿನಲ್ಲಿ 2 ಕೋಟಿ ಜನರಿಗೆ ಕೊಟ್ಟಿದ್ದಾರೆ, ಕೇರಳ ಸರ್ಕಾರ ೨೦ ಸಾವಿರ ಕೋಟಿ ಮೀಸಲಿಟ್ಟಿದೆ. ಮನೆ ಮನೆಗೆ ರೇಷನ್ ಹಂಚುತ್ತಿದೆ. ಅಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಸಾಧ್ಯವಾಗಲಿಲ್ಲ. ಸರ್ಕಾರ ಇಲ್ಲೂ ಕೂಡ ಸಹಾಯ ಮಾಡಬೇಕು' ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.

  ಭಾನುವಾರ ಕಲಾವಿದರಿಗೆ ಉಚಿತ ಕಿಟ್ ವಿತರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ''ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದರು.

  ಇತ್ತೀಚಿಗೆ ಪ್ರಕಟಿಸಲಾದ ಪ್ಯಾಕೇಜ್‌ನಲ್ಲಿ ಕಲಾವಿದರಿಗೆ 3,000 ಕೊಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದರಲ್ಲಿ ಚಿತ್ರರಂಗದ ಪೋಷಕ ಕಲಾವಿದರೂ ಸೇರಿದ್ದಾರಾ ಇಲ್ಲವಾ ಎಂಬ ಬಗ್ಗೆ ಗೊಂದಲವಿದೆ. ಚಿತ್ರರಂಗದ ಕಲಾವಿದರಿಗೂ ಆ ಹಣ ಸಿಗುವ ಬಗ್ಗೆ ಕನ್ನಡ ಮತ್ತು‌ ಸಂಸ್ಕೃತ ಇಲಾಖೆ ಕ್ರಮ ವಹಿಸುವ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಅವರು ಹೇಳಿದ್ದರು.

  English summary
  MLA Zameer ahmed khan and EX Cm siddaramaiah distributed Food Kit to Film industry workers.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X