ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ
Recommended Video
ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರ್ದೇಶಕರಾದ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಅಗಲಿದ ಕಾರ್ನಾಡ್ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
"ಜ್ಞಾನಪೀಠ ಪ್ರಶಸ್ತಿ ವಿಜೇತರು. ಚಿಂತಕರು, ನಾಟಕಕಾರ, ನಿರ್ದೇಶಕರು, ನಟರಾದ ಗಿರೀಶ್ ಕಾರ್ನಾಡ್ ರವರು ಇಂದ ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿಸಿಗಲೆಂದು ಪ್ರಾರ್ಥಿಸೋಣ" ಸಿಂಪಲ್ ಸುನಿ ಟ್ವೀಟ್ ಮಾಡಿದ್ದಾರೆ.

ಇನ್ನು ಪವನ್ ಒಡೆಯರ್ ನಿರ್ದೇಶನದ ರಣ ವಿಕ್ರಮ ಸಿನಿಮಾದಲ್ಲಿ ಗಿರೀಶ್ ಕಾರ್ನಾಡ್ ಅವರು ಪ್ರಮುಕ ಪಾತ್ರದಲ್ಲಿ ಮಿಂಚಿದ್ದರು. ಕಾರ್ನಾಡ್ ಅರ ನಿಧನದ ಸುದ್ದಿ ನಂಬಲಿಕ್ಕೆ ಅಸಾಧ್ಯ ಎಂದು ಪವನ್ ಹೇಳಿದ್ದಾರೆ.
"ಗಿರೀಶ್ ಕಾರ್ನಾಡ್ ಇನ್ನಿಲ್ಲ ಎನ್ನುವುದನ್ನು ನಂಬಲಿಕ್ಕೆ ಅಸಾಧ್ಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕರ್ನಾಟಕ ಸಾಹಿತ್ಯ ಲೋಕಕ್ಕೆ ದೊಡ್ಡ ನಷ್ಟವಾಗಿದೆ" ಎಂದು ಹೇಳಿದ್ದಾರೆ.

ಗಿರೀಶ್ ಕಾರ್ನಾಡ್ ಕೊನೆಯದಾಗಿ ಸಲ್ಮಾನ್ ಖಾನ್ ಅಭಿನಯದ 'ಟೈಗರ್ ಜಿಂದಾ ಹೈ' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.


Click it and Unblock the Notifications











