For Quick Alerts
  ALLOW NOTIFICATIONS  
  For Daily Alerts

  ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಕುರಿತು ಅಪ್‌ಡೇಟ್ ನೀಡಿದ ಮಗ

  |

  ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಮಗ ಎಸ್ ಪಿ ಚರಣ್ ಭಾನುವಾರ ಸಂಜೆ ಮಾಹಿತಿ ನೀಡಿದ್ದಾರೆ

  Upendra ತೆಲುಗು, ತಮಿಳಿನಲ್ಲಿ ಹೆಚ್ಚಾಗಿ ಸಿನಿಮಾ ಮಾಡದಿರಲು ಇದೇ ಕಾರಣ

  ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿರುವ ಎಸ್ ಪಿಬಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಚೆನ್ನೈನ ಎಂಜಿಎಂ ಹೆಲ್ತ್ ಕೇರ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸರಿಯಾದ ಸ್ಪಂದನೆ ಸಿಗದ ಹಿನ್ನೆಲೆ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.

  'ಬೇಗ ಬಾ ಬಾಲು'....ಎಸ್‌ಪಿಬಿ ಕುರಿತು ಭಾವುಕರಾದ ಇಳಯರಾಜಾ

  ಕಳೆದ ಮೂರ್ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಭಾನುವಾರದ ವೇಳೆ ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡು ಬಂದಿದೆ ಎಂದು ಮಗ ಚರಣ್ ಸ್ಪಷ್ಟನೆ ನೀಡಿದ್ದಾರೆ.

  ಈ ಹಿಂದಿನ ಸ್ಥಿತಿಗೆ ಹೋಲಿಸಿಕೊಂಡರೆ ಈಗ ತಂದೆಯ ಆರೋಗ್ಯ ಉತ್ತಮವಾಗಿದೆ. ವೈದ್ಯರನ್ನು ಗುರುತಿಸುತ್ತಿದ್ದಾರೆ, ಅವರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಸಹ ಪಾಸಿಟಿವ್ ಆಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

  ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಪುತ್ರ ಚರಣ್

  ಒಂದು ಅಥವಾ ಎರಡು ದಿನಗಳಲ್ಲಿ ಅವರು ಸರಿ ಹೋಗಲ್ಲ. ಅದಕ್ಕೆ ಸ್ವಲ್ಪ ಸಮಯ ಬೇಕಾಗಿದೆ. ವೈದ್ಯರು ಬಹಳ ಶ್ರಮ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಅವರ ಗುಣಮಖರಾಗುತ್ತಾರೆ ಎಂದು ನಮಗೆ ಸಂಪೂರ್ಣ ಭರವಸೆ ಇದೆ ಎಂದು ಹೇಳಿದ್ದಾರೆ.

  ಇನ್ನು ಎಸ್ ಪಿ ಬಾಲಸುಪ್ರಬ್ರಹ್ಮಣ್ಯಂ ಅವರ ಪತ್ನಿಗೂ ಕೊರೊನಾ ವೈರಸ್ ತಗುಲಿತ್ತು. ಅವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಬುಧವಾರ ಅಥವಾ ಗುರುವಾರ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಎಸ್‌ಪಿಬಿ ಮಾಹಿತಿ ನೀಡಿದ್ದಾರೆ.

  English summary
  SP Balasubrahmanyam in ICU on ventilation, condition stable, confirms son S P Charan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X