Don't Miss!
- News
ವಿಧಾನಸಭಾ ಚುನಾವಣೆ: ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ: ಪ್ರತಿಕ್ರಿಯೆ ನೀಡಿದ ಶಿವಣ್ಣ ಹೇಳಿದ್ದಿಷ್ಟು!
ಹೊಸಪೇಟೆಯಲ್ಲಿ ಕಿಡಿಗೇಡಿ ಒಬ್ಬ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಖಂಡನೆ ವ್ಯಕ್ತವಾಗುತ್ತಿದೆ. ನಟ ಶಿವರಾಜ್‌ಕುಮಾರ್ ಈ ಸಂಬಂಧ ಪ್ರತಿಕ್ರಿಯಿಸಿದ್ದು "ದರ್ಶನ್ ಮೇಲೆ ಗಲಾಟೆ ಆಗಿದ್ದು ನನ್ನ ಮನಸ್ಸಿಗೆ ನೋವುಂಟು ಮಾಡಿದೆ" ಎಂದು ಹೇಳಿದ್ದಾರೆ.
'ಕ್ರಾಂತಿ' ಸಿನಿಮಾ ಸಾಂಗ್ ರಿಲೀಸ್ ವೇಳೆ ಹೊಸಪೇಟೆಯಲ್ಲಿ ಭಾರೀ ಗೊಂದಲ ಏರ್ಪಟ್ಟಿತ್ತು. ನಟ ದರ್ಶನ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಸಂಘರ್ಷ ಅತಿರೇಕಕ್ಕೆ ಹೋಗಿತ್ತು. ಸಾಂಗ್ ರಿಲೀಸ್ ಮಾಡಲು ವೇದಿಕೆ ಏರಿದ್ದ ನಟ ದರ್ಶನ್ ಮೇಲೆ ಅಭಿಮಾನಿಗಳ ಗುಂಪಿನಿಂದ ಚಪ್ಪಲಿ ತೂರಿ ಬಂದಿತ್ತು. ಕಿಡಿಗೇಡಿ ಒಬ್ಬ ಮಾಡಿದ ಈ ತಪ್ಪಿನಿಂದ ಅಭಿಮಾನಿಗಳಲ್ಲಿ ತಪ್ಪು ಸಂದೇಶ ರವಾನೆ ಆಗಿತ್ತು. ಅಪ್ಪು ಅಭಿಮಾನಿಯೇ ಈ ರೀತಿ ಮಾಡಿದ್ದಾನೆ ಎಂದು ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
#WeStandWithDboss:
ದರ್ಶನ್
ಮೇಲೆ
ಚಪ್ಪಲಿ
ಎಸೆದ
ಘಟನೆ:
ನೆಚ್ಚಿನ
ನಟನ
ಬೆಂಬಲಕ್ಕೆ
ನಿಂತ
ಫ್ಯಾನ್ಸ್
ಘಟನೆ ಸಂಬಂಧ ನಟ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಬೇಕು ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಇದೀಗ ವಿಡಿಯೋ ಮಾಡಿ ಶಿವಣ್ಣ ಮಾತನಾಡಿದ್ದಾರೆ. ಅದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಕಲಾವಿದರೆಲ್ಲಾ ಒಂದೇ ಕುಟುಂಬ
"ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಮೇಲೆ ಗಲಾಟೆ ಆಗಿದ್ದು ಕೇಳಿ ನನ್ನ ಮನಸ್ಸಿಗೆ ತುಂಬಾ ಬೇಸರ ಆಯಿತು. ನೋವಾಯಿತು. ಈ ಘಟನೆ ಯಾರೇ ಮಾಡಿದ್ದರು ಅದು ತಪ್ಪು. ನಾವು ಕಲಾವಿದರು ಯಾವಾಗಲೂ ಒಂದೇ ಕುಟುಂಬಕ್ಕೆ ಸೇರಿದವರು. ಈ ಮಾತನನ್ನು ಅಪ್ಪಾಜಿ ಸದಾ ಹೇಳುತ್ತಿದ್ದರು. ನಾವೆಲ್ಲಾ ಒಂದೇ.

ನಾವೆಲ್ಲಾ ಒಂದೇ
" ಒಬ್ಬರಿಗೆ ಅವಮಾನ ಆದರೆ ಎಲ್ಲರಿಗೂ ಅವಮಾನ ಆದಂತೆ ಎಂದು ನಾವು ಅಂದುಕೊಳ್ಳುತ್ತೇವೆ. ದಯವಿಟ್ಟು ಯಾರೇ ಮಾಡಿದ್ದರೂ ಈ ರೀತಿ ಮಾಡುವುದು ತಪ್ಪಾಗುತ್ತದೆ. ದಯವಿಟ್ಟು ಎಲ್ಲರೂ ಒಂದೇ ಎಂದು ಭಾವಿಸಿ. ಏಕೆಂದರೆ ನಾವೆಲ್ಲರೂ ಒಂದೇ ಒಂದೇನೇ." ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

ಮನುಷತ್ವ ಮರೆಯಬೇಡಿ
"ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ" ಎಂದು ವಿಡಿಯೋ ಜೊತೆಗೆ ಶಿವರಾಜ್‌ಕುಮಾರ್ ಬರೆದುಕೊಂಡಿದ್ದಾರೆ.

ದರ್ಶನ್‌ಗೆ ಫ್ಯಾನ್ಸ್ ಬೆಂಬಲ
ಇನ್ನು ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟ ಧನ್ವೀರ್ ಗೌಡ, ರಾಜವರ್ಧನ್, ನಿರ್ದೇಶಕ ಸುನಿ ಸೇರಿದಂತೆ ಹಲವರು ಇದನ್ನು ಖಂಡಿಸಿದ್ದಾರೆ. ಮನುಷತ್ವ ಇರುವವರು ಈ ರೀತಿ ಮಾಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.