Don't Miss!
- Automobiles Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದಲ್ಲಿ ಬರ್ತಿದೆ ಎಸ್ ಪಿ ಬಾಲಸುಬ್ರಹ್ಮಣ್ಯಂ-ಲಕ್ಷ್ಮೀ ಅಭಿನಯದ ಸೂಪರ್ ಹಿಟ್ ಸಿನಿಮಾ
ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಭಿನಯದ 'ಮಿಥುನಂ' ಸಿನಿಮಾ ಅನೇಕ ವರ್ಷಗಳ ಬಳಿಕ ಕನ್ನಡದಲ್ಲಿ ರಿಲೀಸ್ ಆಗುತ್ತಿದೆ. ಗಾಯನದ ಜೊತೆಗೆ ನಟನೆಯ ಮೂಲಕವೂ ಗಮನ ಸೆಳೆದಿರುವ ಎಸ್ ಪಿ ಬಿ ಸುಮಾರು 70ಕ್ಕು ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ 8 ವರ್ಷಗಳ ಹಿಂದೆ ತೆರೆಕೊಂಡಿದ್ದ ತೆಲುಗು ಸಿನಿಮಾ ಮಿಥುನಂ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿದೆ.
2012ರಲ್ಲಿ ರಿಲೀಸ್ ಆಗಿದ್ದ ಮಿಥುನಂ ಸಿನಿಮಾದಲ್ಲಿ ಎಸ್ ಪಿ ಬಿ ಮತ್ತು ನಟಿ ಲಕ್ಷ್ಮೀ ಪ್ರಮುಖ ಪಾತ್ರದಲ್ಲಿ ನಟಿದ್ದಾರೆ. ಶ್ರೀರಮಣ ಬರೆದಿದ್ದ ಮಿಥುನಂ ಕಾದಂಬರಿಗೆ ಸಿನಿಮಾ ರೂಪ ನೀಡಿದ್ದರು ತನಿಕೆಳ್ಳ ಭರಣಿ. ಇದೀಗ ಈ ಸಿನಿಮಾವನ್ನು ಕನ್ನಡದಲ್ಲಿ ರಿಲೀಸ್ ಮಾಡಲು ನಿರ್ಧರಿಸಲಾಗಿದೆ.
ಇಳಯರಾಜ-ಎಸ್ಪಿಬಿ ಮುನಿಸು: ಅಸಲಿ ಕಾರಣ ತಿಳಿಯದೇ ಹೋದ ಬಾಲು
ಸೌಂಡ್ ಆಫ್ ಮ್ಯೂಸಿಕ್ ಗುರುರಾಜ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ. ಡಬ್ಬಿಂಗ್ ಕಾರ್ಯ ಸಂಪೂರ್ಣವಾಗಿ ಮುಗಿದ ಬಳಿಕ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಈ ಸಿನಿಮಾವನ್ನು ರಾಜ್ಯದಾದ್ಯಂತ ರಿಲೀಸ್ ಮಾಡಲು ಸಿದ್ಧತೆ ನಡೆಯಲಾಗಿದೆಯಂತೆ.
Recommended Video
ಕನ್ನಡದಲ್ಲಿ ಮಿಥುನಂ ಸಿನಿಮಾ, ಮಿಥುನ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಸಿನಿಮಾ ನಾಲ್ಕು ರಾಜ್ಯ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಹೊಸ ಸಿನಿಮಾಗಳು ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿರುವ ಈ ಸಮಯದಲ್ಲಿ ಹಳೆಯ ಸಿನಿಮಾವನ್ನು ಡಬ್ ಮಾಡಿ ರಿಲೀಸ್ ಮಾಡುತ್ತಿರುವುದು ವಿಶೇಷ.