Don't Miss!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶ್ರೀಮುರಳಿಗೆ ಮೊಣಕಾಲು ಶಸ್ತ್ರ ಚಿಕಿತ್ಸೆ ಯಶಸ್ವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್.. 3 ತಿಂಗಳು ರೆಸ್ಟ್!
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಶ್ರೀ ಮುರಳಿ 'ಬಘೀರ' ಸಿನಿಮಾದ ಶೂಟಿಂಗ್ ವೇಳೆ ಗಾಯಗೊಂಡಿದ್ದರು. ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ 'ಬಘೀರ' ಸಿನಿಮಾವನ್ನು ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಶ್ರೀ ಮುರಳಿಗೆ ಗಾಯವಾಗಿದ್ದು, ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೀರೋಯಿಸಂ
ತೇರೆಮೇಲೆ
ತೋರಿಸೋದಲ್ಲ,
ನಿಜವಾಗಲೂ
ಹೀರೋ
ಆಗ್ಬೇಕು
ರೋರಿಂಗ್ ಸ್ಟಾರ್ ಶ್ರೀಮುರಳಿ 'ಮದಗಜ' ಸಿನಿಮಾ ಶೂಟಿಂಗ್ ವೇಳೆನೇ ಮೊಣಕಾಲಿಗೆ ಪೆಟ್ಟಾಗಿತ್ತು. 'ಬಘೀರ' ಶೂಟಿಂಗ್ ವೇಳೆನೂ ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ತಿಳಿಸಿದ್ದರು. ಹೀಗಾಗಿ ವಿಕ್ರಮ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಇಂದು (ಜನವರಿ 17) ಡಿಸ್ಚಾರ್ಜ್ ಮಾಡಲಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್.. 3 ತಿಂಗಳು ರೆಸ್ಟ್!
ರಾಕ್‌ಲೈನ್ ಸ್ಟುಡಿಯೋದಲ್ಲಿ ಶ್ರೀಮುರಳಿ 'ಬಘೀರ' ಸಿನಿಮಾದ ಆಕ್ಷನ್ ಸೀಕ್ವೆನ್ಸ್‌ನಲ್ಲಿ ನಿರತರಾಗಿದ್ದರು. ಈ ವೇಳೆ ಶ್ರೀ ಮುರಳಿ ಬಿದ್ದು ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಶ್ರೀಮುರಳಿಯವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಸದ್ಯ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ವೈದ್ಯರು ಮೂರು ತಿಂಗಳು ವಿಶ್ರಾಂತಿ ಹೇಳಿದ್ದಾರೆ.

'ಬಘೀರ' ಶೂಟಿಂಗ್ ಸ್ಥಗಿತ
ಶ್ರೀಮುರಳಿ ನಟಿಸುತ್ತಿರುವ 'ಬಘೀರ' ಸಿನಿಮಾದ ಶೂಟಿಂಗ್ ಕೊನೆಯ ಹಂತದಲ್ಲಿತ್ತು. ಕೊನೆಯ ಎರಡು ದಿನಗಳು ಶೂಟಿಂಗ್ ಮುಗಿದಿದ್ದರೆ, ಸಿನಿಮಾ ಮುಗಿಯುತ್ತಿತ್ತು. ಅಷ್ಟರಲ್ಲೇ ಶ್ರೀಮುರಳಿ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ ಇನ್ನು ಮೂರು ತಿಂಗಳು ಸಿನಿಮಾ ಶೂಟಿಂಗ್ ಮತ್ತೆ ಆರಂಭ ಆಗುವುದು ಬಹುತೇಕ ಅನುಮಾನವೆಂದೇ ಹೇಳಲಾಗುತ್ತಿದೆ.

'ಮದಗಜ' ವೇಳೆ ಪೆಟ್ಟು
ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಪೆಟ್ಟು ಆಗಿದ್ದು ಇದು ಮೊದಲೇನಲ್ಲ. ಮಹೇಶ್ ಕುಮಾರ್ ನಿರ್ದೇಶಿಸಿದ ಸಿನಿಮಾ 'ಮದಗಜ'ದ ಆಕ್ಷನ್ ಸೀಕ್ವೆನ್ಸ್ ವೇಳೆ ಮೊದಲ ಬಾರಿಗೆ ಪೆಟ್ಟು ಆಗಿತ್ತು. ಈ ವೇಳೆನೇ ವೈದ್ಯರು ವಿಶ್ರಾಂತಿ ಹಾಗೂ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಸೂಚನೆಯನ್ನು ನೀಡಿದ್ದರು. ಆಗಲೇ ಸುಮಾರು ಮೂರು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದರು. ಆಗ ಶ್ರೀಮುರಳಿ ಚೇತರಿಸಿಕೊಂಡು ಮತ್ತೆ ಚಿತ್ರೀಕರಣಕ್ಕೆ ಮರಳಿದ್ದರು.

'ಬಘೀರ' ರಿಲೀಸ್ ಯಾವಾಗ?
'ಬಘೀರ' ಸಿನಿಮಾ ಶೂಟಿಂಗ್ ಬಹುತೇಕ ಕೊನೆಯ ಹಂತದಲ್ಲಿ ಇತ್ತು ಎಂದು ಹೇಳಲಾಗಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ದರೆ, ಬಹುಶ: ಈ ವರ್ಷದ ಸೆಕೆಂಡ್ ಹಾಫ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿತ್ತು. ಅಲ್ಲದೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವುದರಿಂದ ಸಿನಿಮಾ ಬಗ್ಗೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.