"ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪ ಮಾಡ್ತಿರೋದು ದುರಾದೃಷ್ಟಕರ": ಶ್ರೀದೇವಿ ಬೈರಪ್ಪ
ದೊಡ್ಮನೆಯಲ್ಲಿ ವಿಚ್ಛೇದನದ ಇಂತಹದ್ದೊಂದು ಪ್ರಕರಣ ಇದೇ ಮೊದಲು. ಯುವ ರಾಜ್‌ಕುಮಾರ್ ಡಿವೋರ್ಸ್ ಪ್ರಕರಣ ಸ್ಯಾಂಡಲ್‌ವುಡ್ ಸಂಚಲನ ಸೃಷ್ಟಿಸಿದೆ. ಇಂತಹದ್ದೊಂದು ಕ್ಷಣವನ್ನು ನಿರೀಕ್ಷೆ ಮಾಡದ ಅಭಿಮಾನಿಗಳು ಕೂಡ ಶಾಕ್ ಆಗಿದ್ದಾರೆ. ಆದರೆ, ಆರೋಪ- ಪ್ರತ್ಯಾರೋಪಗಳು ದೊಡ್ಡ ಮಟ್ಟಕ್ಕೆ ಚರ್ಚೆಯಾಗುತ್ತಿದೆ.
ಯುವ ರಾಜ್‌ಕುಮಾರ್ ವಿಚ್ಛೇದನದ ನೋಟೀಸ್‌ಗೆ ಶ್ರೀದೇವಿ ಬೈರಪ್ಪ ಕೂಡ ರಿಪ್ಲೈ ನೋಟೀಸ್ ಕಳುಹಿಸಿದ್ದರು. ಈ ಬೆನ್ನಲ್ಲೇ 'ಕಾಂತಾರ' ನಟಿ ಸಪ್ತಮಿ ಗೌಡ ಹೆಸರು ತಳುಕು ಹಾಕಿಕೊಂಡಿತ್ತು. ಇದೂ ಕೂಡ ಸುದ್ದಿಯಾಗುತ್ತಿದ್ದಂತೆ ಯುವ ರಾಜ್‌ಕುಮಾರ್ ಪರ ವಕೀಲರು ಸಿರಿಲ್ ಪ್ರಸಾದ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದರು.

ಈ ವೇಳೆ ಶ್ರೀದೇವಿ ಬೈರಪ್ಪ ಅವರಿಗೂ ಅಕ್ರಮ ಸಂಬಂಧವಿದೆ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕ ಶ್ರೀದೇವಿ ಬೈರಪ್ಪ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೆ, ಒಬ್ಬ ಹೆಣ್ಣಿನ ಬಗ್ಗೆ ಹೀಗೆಲ್ಲ ಮಾತಾಡಿದ್ದು ನೋವುಂಟು ಮಾಡಿದೆ ಎಂದಿದ್ದಾರೆ. ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್‌ನ ಸಾರಾಂಶ ಹೀಗಿದೆ.
"ವೃತ್ತಿಪರ ಸೌಹಾರ್ಧತೆಯನ್ನು ಕಾಪಾಡಿಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರಾದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.
ಕೆಲವು ತಿಂಗಳಿನಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. "
ಸತ್ಯ ಮತ್ತು ನ್ಯಾಯವು ಖಂಡಿತಾ ಮೇಲು ಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ." ಎಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶ್ರೀದೇವಿ ಬೈರಪ್ಪ ಪೋಸ್ಟ್ ಮಾಡಿದ್ದಾರೆ.


Click it and Unblock the Notifications











