For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ರೀಮುರಳಿ; 'ಮದಗಜ' ತಂಡದ ಜೊತೆ ಸಂಭ್ರಮಾಚರಣೆ

  |

  ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಇಂದು (ಡಿಸೆಂಬರ್ 17) ಹುಟ್ಟುಹಬ್ಬದ ಸಂಭ್ರಮ. ಈ ವರ್ಷ ಶ್ರೀಮರಳಿ ಹುಟ್ಟುಹಬ್ಬವನ್ನು ಸ್ನೇಹಿತರು ಮತ್ತು ಕುಟುಂಬದ ಜೊತೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬ ಅಂದರೆ ಸಾಕು ಅಭಿಮಾನಿಗಳು ಮನೆ ಮುಂದೆ ಜಮಾಯಿಸುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

  Sri Murali ಹುಟ್ಟುಹಬ್ಬಕ್ಕೆ ಬಂಪರ್ ಗಿಫ್ಟ್ ಕೊಟ್ಟ Mahesh Kumar | Madagaja | Filmibeat Kannada

  ಪ್ರತಿವರ್ಷ ಆಪಾರ ಸಂಖ್ಯೆಯ ಅಭಿಮಾನಿಗಳು ಮನೆಯಮಂದೆ ಬಂದು ಜಮಾಯಿ, ನೆಚ್ಚಿನ ನಟನನ್ನು ನೋಡಿ, ವಿಶ್ ಮಾಡಿ ಆನಂದಿಸುತ್ತಿದ್ದರು. ಆದರೆ ಈ ವರ್ಷ ಈ ಎಲ್ಲಾ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಈ ಬಾರಿ ಕೇವಲ ಸ್ನೇಹಿತರ ಜೊತೆ ಮಾತ್ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಶ್ರೀಮುರಳಿ ಸದ್ಯ ಮದಗಜ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

  'ನಿಮ್ಮ ಪ್ರೀತಿಯನ್ನು ನಾನು ತಿರಸ್ಕರಿಸುವುದಿಲ್ಲ, ನೀವಿದ್ದಲ್ಲಿಯೇ ಹಾರೈಸಿ': ಶ್ರೀಮುರಳಿ ವಿನಂತಿ

  ಈ ವರ್ಷದ ಹುಟ್ಟುಹಬ್ಬವನ್ನು ಮದಗಜ ಸಿನಿಮಾತಂಡದ ಜೊತೆ ಆಚರಣೆ ಮಾಡಿಕೊಂಡಿದ್ದಾರೆ. ನಿರ್ದೇಶಕ ಮಹೇಶ್, ನಿರ್ಮಾಪಕ ಉಮಾಪತಿ, ನಟಿ ಆಶಿಕಾ ರಂಗನಾಥ್ ಸೇರಿದಂತೆ ಇಡೀ ಸಿನಿಮಾತಂಡ ಶ್ರೀಮುರಳಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

  ಶ್ರೀಮುರಳಿ ಹುಟ್ಟುಹಬ್ಬದ ಫೋಟೋಗಳು ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಾರಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ, ಮನೆಯ ಬಳಿ ಅಭಿಮಾನಿಗಳು ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಶ್ರೀಮುರಳಿ, 'ಈ ಬಾರಿ ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣ COVID! ನಮ್ಮಿಂದಾರಿಂದಲೂ ಬೇರೆ ಯಾರಿಗೂ ಅನಾನುಕೂಲ ಆಗುವುದು ಬೇಡ. ನಾನು ಕಾರಣಾಂತರಗಳಿಂದ ಮನೆಯಲ್ಲಿ ಇರುವುದಿಲ್ಲ. ಯಾರು ಸಹಿತ ಮನೆ ಹತ್ತಿರ ಬಂದು ಬೇಸರರಾಗಬೇಡಿ, ಯಾವ ಹಾರ, ಕೇಕ್, ಗಿಫ್ಟ್ ಗಳಿಗೆ ಖರ್ಚ್ ಮಾಡಬೇಡಿ.' ಎಂದು ಮನವಿ ಮಾಡಿಕೊಂಡಿದ್ದರು.

  ಇನ್ನೂ ಹುಟ್ಟುಹಬ್ಬದ ಪ್ರಯುಕ್ತ ಶ್ರೀಮುರಳಿ ಅಭಿನಯದ ಮದಗಜ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಶ್ರೀಮರಳಿ ಮತ್ತೊಮ್ಮೆ ಮಾಸ್ ಲುಕ್ ನಲ್ಲಿ ಮಿಂಚಿದ್ದು, ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಶ್ರೀಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Actor Srimurali celebrating his birthday with madagaja team.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X