'ಮದಗಜ' ಮೂರನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ ಶ್ರೀಮುರಳಿ

ಮೈಸೂರಿನಲ್ಲಿ ಕಳೆದ ತಿಂಗಳು ಎರಡನೇ ಹಂತದ ಚಿತ್ರೀಕರಣ ಮುಗಿಸಿದ್ದ ಮದಗಜ ಸಿನಿಮಾತಂಡ ಈಗ ಮೂರನೇ ಹಂತದ ಶೂಟಿಂಗ್‌ಗೆ ಸಜ್ಜಾಗಿದೆ. ಡಿಸೆಂಬರ್ 1ನೇ ತಾರೀಕಿನಿಂದ ಬೆಂಗಳೂರಿನಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭ ಮಾಡಲು ಮದಗಜ ಚಿತ್ರತಂಡ ಯೋಜನೆ ಹಾಕಿಕೊಂಡಿದೆಯಂತೆ.

ಬೆಂಗಳೂರಿನಲ್ಲಿ ಅದ್ಧೂರಿ ಸೆಟ್‌ ಹಾಕಿ ಮದಗಜ ಶೂಟಿಂಗ್ ಮಾಡುವ ಪ್ಲಾನ್ ಇದೆ. ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅವರು ಮಿನರ್ವ ಮಿಲ್ ಮತ್ತು ಎಚ್ ಎಂ ಟಿ ಫ್ಯಾಕ್ಟರಿಯಲ್ಲಿ ಸೆಟ್ ಹಾಕಲಿದ್ದಾರೆ.

ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿರುವ ಮದಗಜ ಸಿನಿಮಾ ಪಕ್ಕಾ ಫ್ಯಾಮಿಲಿ ಆಕ್ಷನ್ ಡ್ರಾಮಾ ಆಗಿದ್ದು, ಶ್ರೀಮುರಳಿ ಅಭಿಮಾನಿಗಳಿಗೆ ಇದು ಇಷ್ಟ ಆಗಲಿದೆ ಎಂದು ಹೇಳಲಾಗಿದೆ.

Srimurali gears up for the third schedule of MadaGaja from December 1

ರಾಬರ್ಟ್ ಚಿತ್ರ ನಿರ್ಮಿಸಿರುವ ಉಮಾಪತಿ ಶ್ರೀನಿವಾಸ್ ಮದಗಜ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಮೊದಲ ಸಲ ಮಹೇಶ್ ಕುಮಾರ್ ಹಾಗೂ ಶ್ರೀಮುರಳಿ ಜೊತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ವಾರಣಾಸಿಯಲ್ಲಿ ಮೊದಲ ಹಂತದ ಶೂಟಿಂಗ್ ಮುಗಿದಿತ್ತು. ನಂತರ ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮಾಡಲಾಗಿತ್ತು.

ಚಿತ್ರದಲ್ಲಿ ಶ್ರೀಮುರಳಿಗೆ ಆಶಿಕಾ ರಂಗನಾಥ್ ಜೋಡಿಯಾಗಲಿದ್ದು. ತೆಲುಗು ನಟ ಜಗಪತಿ ಬಾಬು ಪ್ರಮುಖ ಖಳನಾಯಕನ ಪಾತ್ರ ನಿರ್ವಹಿಸಲಿದ್ದಾರೆ. ಸುಮಾರು 20 ವರ್ಷದ ನಂತರ ದಕ್ಷಿಣ ಭಾರತದ ಖ್ಯಾತ ನಟಿ ದೇವಯಾನಿ ಕನ್ನಡ ಚಿತ್ರರಂಗಕ್ಕೆ ಮದಗಜ ಚಿತ್ರದ ಮೂಲಕ ಕಂಬ್ಯಾಕ್ ಆಗುತ್ತಿದ್ದಾರೆ.

ಅಂದ್ಹಾಗೆ, ಮದಗಜ ಚಿತ್ರಕ್ಕೆ ನವೀನ್ ಕುಮಾರ್ ಅವರು ಛಾಯಾಗ್ರಹಣವಿದ್ದು, ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಚೇತನ್ ಕುಮಾರ್, ರವಿಬಸ್ರೂರು ಈ ಚಿತ್ರಕ್ಕೆ ಸಾಹಿತ್ಯ ರಚಿಸಲಿದ್ದಾರೆ.

More from Filmibeat

English summary
Roaring star Sri murali gears up for the third schedule of Madagaja from December 1.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X