Don't Miss!
- Sports
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ವಿಕೆಟ್ ಕೀಪರ್ ಆಗಿ ಈತನೇ ಸೂಕ್ತ ಎಂದ ಆಕಾಶ್ ಚೋಪ್ರ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಮದಗಜ' ಚಿತ್ರತಂಡ ನೀಡಲಿದೆ ಹೊಸ ಅಪ್‌ಡೇಟ್: ಏನು ಆ ಸರ್ಪ್ರೈಸ್?
ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮದಗಜ ಚಿತ್ರತಂಡ ಇಂದು ಸಂಜೆ ಸರ್ಪ್ರೈಸ್ ಸುದ್ದಿಯೊಂದನ್ನು ನೀಡಲಿದೆ. ಟೀಸರ್ ರಿಲೀಸ್ ಮಾಡಿ ನಿರೀಕ್ಷೆ ಹೆಚ್ಚಿಸಿರುವ ಚಿತ್ರ ಈಗ ಮುಂದಿನ ಅಪ್‌ಡೇಟ್ ನೀಡುತ್ತಿದೆ.
Recommended Video
ಈ ಕುರಿತು ಉಮಾಪತಿ ಫಿಲಂಸ್ ಹಾಗೂ ನಿರ್ದೇಶಕ ಮಹೇಶ್ ಕುಮಾರ್ ಟ್ವೀಟ್ ಮಾಡಿದ್ದು, ಫೆಬ್ರವರಿ 9 ರಂದು ಸಂಜೆ 5.05 ಗಂಟೆಗೆ ಏನು ಆ ಸರ್ಪ್ರೈಸ್ ಎಂದು ಘೋಷಣೆ ಮಾಡಲಿದ್ದಾರೆ. ಸದ್ಯಕ್ಕೆ ಅಪ್‌ಡೇಟ್ ಏನು ಎನ್ನುವುದು ತಿಳಿದಿಲ್ಲ. ಆದರೆ, ಟ್ರೈಲರ್ ಅಥವಾ ಮೊದಲ ಹಾಡು ರಿಲೀಸ್ ಮಾಡಬಹುದಾ ಎಂದು ನಿರೀಕ್ಷಿಸಲಾಗುತ್ತಿದೆ.
ಅಂದ್ಹಾಗೆ, ಮದಗಜ ಸಿನಿಮಾ ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಮೂರು ಭಾಷೆಯಲ್ಲಿ ಟೀಸರ್ ರಿಲೀಸ್ ಆಗಿದ್ದು, ದಕ್ಷಿಣ ಭಾರತದಲ್ಲಿ ರೋರಿಂಗ್ ಸ್ಟಾರ್ ಘರ್ಜಿಸುತ್ತಿದ್ದಾರೆ.
ಮದಗಜ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ. ಬಾಕಿ ಉಳಿದಿರುವ ಶೂಟಿಂಗ್ ಮಾಡಲಾಗುತ್ತಿದೆ. ಶ್ರೀಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ನಿರ್ದೇಶಕ ಮಹೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಮದಗಜ ಚಿತ್ರದ ಶೂಟಿಂಗ್ ವಿಡಿಯೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ.
'ಭರಾಟೆ' ಸಿನಿಮಾ ಬಳಿಕ ಶ್ರೀಮುರಳಿ ನಟಿಸುತ್ತಿರುವ ಚಿತ್ರ ಇದಾಗಿದೆ. ಅದೇ ರೀತಿ ಅಯೋಗ್ಯ ಸಿನಿಮಾದ ಯಶಸ್ಸಿನ ಬಳಿಕ ಮಹೇಶ್ ನಿರ್ದೇಶನ ಮಾಡುತ್ತಿರುವ ಚಿತ್ರ. ರಾಬರ್ಟ್ ಚಿತ್ರಕ್ಕೆ ಬಂಡವಾಳ ಹಾಕಿರುವ ಉಮಾಪತಿ ಜೊತೆಜೊತೆಗೆ ಮದಗಜ ನಿರ್ಮಿಸಿದ್ದಾರೆ.