For Quick Alerts
  ALLOW NOTIFICATIONS  
  For Daily Alerts

  ಮತ್ತೆ ವಾಪಸ್ ಆದ ನಟಿ ಶ್ರುತಿ ಹರಿಹರನ್; ಧನಂಜಯ್ ಸಿನಿಮಾದಲ್ಲಿ ನಟನೆ

  By ಫಿಲ್ಮಿಬೀಟ್ ಡೆಸ್ಕ್
  |

  ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಮಿ ಟೂ ಪ್ರಕರಣದ ಬಳಿಕ ಶ್ರುತಿ ಹರಿಹರನ್ ಬಣ್ಣದ ಲೋಕದಿಂದ ದೂರ ಸರಿದಿದ್ದರು. ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಶ್ರುತಿ ಹರಿಹರನ್ ಮುದ್ದಾದ ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದರು. ಇದೀಗ ಕೊಂಚ ಬ್ರೇಕ್ ಬಳಿಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ.

  ಸ್ಯಾಂಡಲ್ ವುಡ್ ಸ್ಟಾರ್ ನಟನ ಸಿನಿಮಾ ಮೂಲಕ ಶ್ರುತಿ ಹರಿಹರನ್ ಮತ್ತೆ ವಾಪಸ್ ಆಗುತ್ತಿದ್ದು, ಚಿತ್ರದ ಬಗ್ಗೆ ಸಖತ್ ಉತ್ಸುಕರಾಗಿದ್ದಾರೆ. ಅಂದಹಾಗೆ ಶ್ರುತಿ ಹರಿಹರನ್ ಮತ್ತೆ ವಾಪಸ್ ಆಗುತ್ತಿರುವುದು ಧನಂಜಯ್ ಸಿನಿಮಾ ಮೂಲಕ. ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಮೂಲಕ ಶ್ರುತಿ ಹರಿಹರನ್ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ.

  ಧನಂಜಯ್ 'ಹೆಡ್‌ಬುಷ್' ಚಿತ್ರಕ್ಕೆ ಎಂಟ್ರಿಯಾದ ಕನ್ನಡದ ಸ್ಟಾರ್ ನಟಧನಂಜಯ್ 'ಹೆಡ್‌ಬುಷ್' ಚಿತ್ರಕ್ಕೆ ಎಂಟ್ರಿಯಾದ ಕನ್ನಡದ ಸ್ಟಾರ್ ನಟ

  ಅಂದಹಾಗೆ ಚಿತ್ರದಲ್ಲಿ ಬಹುಭಾಷಾ ನಟಿ ಪಾಯಲ್ ರಜಪೂತ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರಕ್ಕೆ ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ ಎಂಟ್ರಿ ಕೊಟ್ಟಿದರು. ಇದೀಗ ಶ್ರುತಿ ಹರಿಹರನ್ ಎಂಟ್ರಿ ಚಿತ್ರದ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಇನ್ನು ವಿಶೇಷ ಎಂದರೆ ಚಿತ್ರಕ್ಕೆ ಮತ್ತೋರ್ವ ನಟನ ಆಗಮನವಾಗಿದೆ. ಕಪಟ ನಾಟಕ ಪಾತ್ರಧಾರಿ ಮತ್ತು ಹುಲಿರಾಯ ಸಿನಿಮಾಗಳಲ್ಲಿ ನಟಿಸಿದ್ದ ಬಾಲು ನಾಗೇಂದ್ರ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

  ಅಂದಹಾಗೆ ಹೆಡ್ ಬುಷ್ ಈಗಾಗಲೇ ಗೊತ್ತಿರುವ ಹಾಗೆ ಭೂಗತ ಲೋಕದಲ್ಲಿ ಡಾನ್ ಆಗಿ ಮೆರೆದಿದ್ದ ಜಯರಾಜ್ ಕಥೆ. ಡಾನ್ ಜಯರಾಜ್ ಪಾತ್ರದಲ್ಲಿ ನಟ ಧನಂಜಯ್ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಧನಂಜಯ್ ಹಟ್ಟುಹಬ್ಬದ ದಿನ ಬಂದ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದೆ.

  ಅಂದಹಾಗೆ ಹೆಡ್ ಬುಷ್ ಚಿತ್ರಕ್ಕೆ ಅಗ್ನಿ ಶ್ರೀಧರ್ ಕಥೆ ಬರೆದಿದ್ದಾರೆ. ನಿರ್ದೇಶಕ ಶೂನ್ಯ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಧನಂಜಯ್ ಅವರ ಹೋಮ್ ಬ್ಯಾನರ್ ಡಾಲಿ ಪ್ರೊಡಕ್ಷನ್ ನಲ್ಲಿ ಮೂಡಿಬರುತ್ತಿದೆ. ಪ್ಯಾನ್ ಮಟ್ಟದಲ್ಲಿ ಸಿನಿಮಾ ತಯಾರಾಗುತ್ತಿದ್ದು, ದೊಡ್ಡ ಮಟ್ಟದಲ್ಲಿ ಹೆಡ್ ಬುಷ್ ತೆರೆಗೆ ಬರುತ್ತಿದೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ತಯಾರಾಗುತ್ತಿದ್ದು, ಎರಡು ಭಾಗದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

  ಸ್ಯಾಂಡಲ್ ವುಡ್ ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಹೆಡ್ ಬುಷ್ ಚಿತ್ರದಲ್ಲಿ ಶ್ರುತಿ ಹರಿಹರನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಶ್ರುತಿ ಹರಿಹರನ್ ಕೊನೆಯದಾಗಿ ಆದ್ಯ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ 2020ರಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ಜೊತೆಗೆ ತಮಿಳು ವೆಬ್ ಸೀರಿಸ್ ನಲ್ಲೂ ಶ್ರುತಿ ಹರಿಹರನ್ ಮಿಂಚಿದ್ದರು. ಇದೀಗ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ರಿ ಎಂಟ್ರಿ ಕೊಡುತ್ತಿದ್ದಾರೆ.

  English summary
  Actress Sruthi Hariharan come back to film, She joins Dhananjay starrer Head Bush team.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X