ಸರ್ಜಾ ಆಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಶ್ರುತಿ

Recommended Video

ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಶ್ರುತಿ ಹರಿಹರನ್ ದೂರು ದಾಖಲು | FILMIBEAT KANNADA

ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಸಮರ ಮುಂದುವರೆದಿದೆ. ಈಗ ನಟ ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರ್ಗಿ ಅವರ ಮೇಲೆ ಶ್ರುತಿ ಹರಿಹರನ್ ದೂರು ನೀಡಿದ್ದಾರೆ.

ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರನ್ನು ಕರೆಸಿ ಮಾತುಕತೆ ಮಾಡಲಾಯಿತು. ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಈ ಸಭೆ ವಿಫಲವಾಗಿತ್ತು. ಇಬ್ಬರೂ ಸಂಧಾನಕ್ಕೆ ಒಪ್ಪದ ಕಾರಣ ನಿನ್ನೆ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಂಡಿರಲಿಲ್ಲ.

ಆದರೆ, ನಿನ್ನೆ ಸಭೆಯ ನಂತರ ಶ್ರುತಿ ಹರಿಹರನ್ ಇನ್ನೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಿನ್ನೆ ಮಧ್ಯರಾತ್ರಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸರ್ಜಾ ಆಪ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ್ದಾರೆ.

sruthi hariharan filed a complaint against prashanth sambargi

''ಮಾಧ್ಯಮಗಳ ಜೊತೆಗೆ ಮಾತನಾಡುವಾಗ ಪ್ರಶಾಂತ್ ಸಂಬರ್ಗಿ, ನಾನು ಹಿಂದೂ ಧರ್ಮದ ವಿರೋಧಿ ಎಂದು ಹೇಳಿ ಒಂದು ಸಮುದಾಯವನ್ನು ನನ್ನ ವಿರುದ್ಧ ಎತ್ತಿ ಕಟ್ಟಿದ್ದಾರೆ. ಜೊತೆಗೆ ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ.'' ಎಂದು ದೂರಿನಲ್ಲಿ ಶ್ರುತಿ ಉಲ್ಲೇಖ ಮಾಡಿದ್ದಾರೆ.

ಈಗಾಗಲೇ ಅರ್ಜುನ್ ಸರ್ಜಾ, ಶ್ರುತಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದು, ಈಗ ಶೃತಿ ಹರಿಹರನ್ ತಮ್ಮ ವಕೀಲ ತಂಡದ ಜೊತೆಗೆ ಹೋಗಿ ಪೊಲೀಸರಿಗೆ ದೂರು ನೀಡಿ ಬಂದಿದ್ದಾರೆ.

More from Filmibeat

English summary
Kannada actress Sruthi Hariharan filed a complaint against prashanth sambargi.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X