ಸರ್ಜಾ ವಿರುದ್ಧ ಶ್ರುತಿ ಬಳಿ ಇದೆಯಂತೆ 'ವಿಡಿಯೋ' ಸಾಕ್ಷಿ.!
Recommended Video

ಸ್ಯಾಂಡಲ್ ವುಡ್ ನಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರ ಮೀಟೂ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಸರ್ಜಾ ಅಭಿಮಾನಿಗಳು ಶ್ರುತಿಯನ್ನ ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದಾರೆ ಮತ್ತು ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬಳಿಕ ಮಾತನಾಡಿದ ಶ್ರುತಿ ಹರಿಹರನ್, ''ಸರ್ಜಾ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿಯಿದ್ದ ಸಾಕ್ಷಿಗಳನ್ನ ಕೋರ್ಟ್ ಗೆ ಸಲ್ಲಿಸಿದ್ದೇವೆ. ನನ್ನ ಬಳಿಯೂ ವಿಡಿಯೋ ಸಾಕ್ಷಿಗಳು ಇವೆ, ಅದನ್ನ ಕೂಡ ನ್ಯಾಯಾಲಯಕ್ಕೆ ಒದಗಿಸಲಾಗಿದೆ'' ಎಂದು ಹೇಳಿದ್ದಾರೆ.
ಇನ್ನು 'ವಿಸ್ಮಯ' ಚಿತ್ರದ ಶೂಟಿಂಗ್ ವೇಳೆ ನಟ ಸರ್ಜಾ ನನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಬ್ಬನ್ ಪಾರ್ಕ್ ಪೊಲೀಸರು ಸರ್ಜಾ ವಿರುದ್ಧ ಎಫ್.ಐ.ಆರ್ ಕೂಡ ಹಾಕಿದ್ದರು. ಈ ಎಫ್.ಐ.ಆರ್ ರದ್ದು ಕೋರಿ ಸರ್ಜಾ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆಯನ್ನ ನವೆಂಬರ್ 28ಕ್ಕೆ ಮುಂದೂಡಿದೆ.

ಮತ್ತೊಂದೆಡೆ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಕೂಡ ನ್ಯಾಯಾಲಯದಲ್ಲಿ ಹೋರಾಟ ಮಾಡ್ತಿದ್ದಾರೆ. ಶ್ರುತಿ ಅವರ ಹೇಳಿಕೆಗೆ ನಿರ್ಬಂಧ ಹೇರಬೇಕು ಮತ್ತು ಮಾನಹಾನಿ ಮಾಡಿದ್ದಾರೆ ಎಂದು ದೂರಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಶ್ರುತಿ ವಿರುದ್ಧ ಎಫ್.ಐ.ಆರ್ ಹಾಕಿದ್ದರು. ಈ ಎಫ್.ಐ.ಆರ್ ರದ್ದು ಕೋರಿ ಶ್ರುತಿ ಕೂಡ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣದ ವಿಚಾರಣೆಯೂ ಮುಂದೂಡಿಕೆಯಾಗಿದೆ.


Click it and Unblock the Notifications











