ಸಿನಿಮಾ ಚಿತ್ರೀಕರಣ ಅನುಮತಿ ನೀಡಿದ ರಾಜ್ಯ ಸರ್ಕಾರ
ಕೊರೊನಾ ಕಾರಣದಿಂದ ನಿಲ್ಲಿಸಲಾಗಿದ್ದ ಸಿನಿಮಾ ಚಿತ್ರೀಕರಣವನ್ನು ಮುಂದುವರೆಸಬಹುದು ಎಂದು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
Recommended Video
ಈ ಮೊದಲು ಕೆಲವು ಷರತ್ತುಗಳು ವಿಧಿಸಿ ಧಾರಾವಾಹಿ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಧಕ್ಕೆ ನಿಂತಿದ್ದ ಸಿನಿಮಾಗಳ ಚಿತ್ರೀಕರಣಕ್ಕೂ ಅವಕಾಶ ನೀಡಲಾಗಿದೆ.
ಇಂದು ಆದೇಶ ಹೊರಡಿಸಿದ ಸರ್ಕಾರ, ಅರ್ಧಕ್ಕೆ ನಿಂತಿದ್ದ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಮಾಡಬಹುದು ಆದರೆ ಅಲ್ಲಿಯೂ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಷರತ್ತು ವಿಧಿಸಿದೆ.

ಕೊರೊನಾ ವೈರಸ್ ನಿಯಂತ್ರಣದ ಸಲುವಾಗಿ ಹೊರಡಿಸಿದ್ದ ರಾಷ್ಟ್ರೀಯ ನಿಯಮಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಪ್ರಾಮಾಣಿತ ಕಾರ್ಯವಿಧಾನ (ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್) ಅನ್ನು ಕಡ್ಡಾಯವಾಗಿ ಪಾಲಿಸೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಅರ್ಧಕ್ಕೆ ನಿಂತ ಸಿನಿಮಾಗಳ ಚಿತ್ರೀಕರಣಕ್ಕೆ ಅವಕಾಶ ನೀಡುತ್ತಿರುವ ಬಗ್ಗೆ ಮಾತ್ರವೇ ಆದೇಶದಲ್ಲಿ ಉಲ್ಲೇಖವಿದ್ದು, ಹೊಸ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಆದೇಶದಲ್ಲಿ ಸ್ಪಷ್ಟತೆ ಇಲ್ಲ.
ಚಿತ್ರೀಕರಣ ಮುಗಿದ ಮೇಲೆ ಯಥಾವತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.


Click it and Unblock the Notifications











