Don't Miss!
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- News
Breaking: ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ!
- Technology
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶ್ರೀ ಕುಮಾರ ಶಿವಯೋಗಿ ಆತ್ಮಚರಿತ್ರೆಯಲ್ಲಿ ಸುಚೇಂದ್ರ ಪ್ರಸಾದ್: ಬೃಹತ್ ರಥಯಾತ್ರೆ!
ನಟ ಸುಚೇಂದ್ರ ಪ್ರಸಾದ್ ಹಾನಗಲ್ ಶ್ರೀ ಕುಮಾರ ಶಿವಯೋಗಿ ಸ್ವಾಮಿ ಆತ್ಮಚರಿತ್ರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ರಾಷ್ಟ್ರ ಪ್ರಶಸ್ತಿ ಗೆದ್ದಿರೋ ನಿರ್ದೇಶಕ ಬಿ ಎಸ್ ಲಿಂಗದೇವರು ಆಕ್ಷನ್ ಕಟ್ ಹೇಳಿದ್ದಾರೆ.
ಮಹಾಪುರುಷ ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಆತ್ಮಚರಿತ್ರೆ 'ವಿರಾಟಪುರ ವಿರಾಗಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಮಹಾಪುರುಷ ಹಾನಗಲ್ ಶ್ರೀ ಕುಮಾರ ಶಿವಯೋಗಿ ಅವರ ನೆನಪಿನಲ್ಲಿ ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ ಮಾಡುವುದಕ್ಕೆ ಮುಂದಾಗಿದೆ.
ವಿರಾಗಿ ಶ್ರೀ ಕುಮಾರೇಶ್ವರ ಬೃಹತ್ ರಥಯಾತ್ರೆಯಲ್ಲಿ ಸುಮಾರು 6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ ಇರುವ ಈ ಬೃಹತ್ ರಥಯಾತ್ರೆ ಡಿಸೆಂಬರ್ 20ರಂದು ಆರಂಭಗೊಳ್ಳಲಿದ್ದು, 2023ಯ ಜನವರಿ 1ರಂದು ಗದಗದಲ್ಲಿ ಮುಕ್ತಾಯಗೊಳ್ಳಲಿದೆ.
ಶ್ರೀ ಕುಮಾರ ಶಿವಯೋಗಿಗಳು ದಂತಕಥೆಯನ್ನು ತೆರೆಮೇಲೆ ತೋರಿಸುವುಕ್ಕೆ ಬಿ ಎಸ್ ಲಿಂಗದೇವರು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾ ಕೂಡ ರೆಡಿಯಾಗಿದೆ. ಶ್ರೀ ಕುಮಾರ ಶಿವಯೋಗಿ ಅವರ ಪಾತ್ರದಲ್ಲಿ ಕನ್ನಡ ಹಿರಿಯ ನಟ ಸುಚೇಂದ್ರ ಪ್ರಸಾದ್ ಕಾಣಿಸಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಲಿಂಗದೇವರು ಆಕ್ಷನ್ ಕಟ್ ಹೇಳಿದ್ದರಿಂದ ಸಿನಿಮಾ ನಿರೀಕ್ಷೆ ದುಪ್ಪಟ್ಟಾಗಿದೆ.
"ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು" ಎಂದು ಪದ್ಮಶ್ರೀ ಪುರಸ್ಕೃತಡಾ. ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ಹಾನಗಲ್ಲ ಗುರುಕುಮಾರ ಶಿವಯೋಗಿಗಳು ತಮ್ಮ ಜೀವಿತಾವಧಿಯಲ್ಲಿ ಹೊಸ ಮನ್ವಂತರಕ್ಕೆ ಬುನಾದಿ ಹಾಕಿದ್ದರು. ಸಮ ಸಮಾಜ ನಿರ್ಮಾಣ. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ಹತ್ತಿ ಕರ್ಖಾನೆಯ ಸ್ಥಾಪನೆ. ಆಯುರ್ವೇದ ಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ. ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಸಾಧ್ಯವಾಗಿಸಿದ್ದಾರೆ.
ಹಾನಗಲ್ಲ ಗುರುಕುಮಾರ ಶಿವಯೋಗಿಗಳ ಆತ್ಮಚರಿತ್ರೆಯೇ 'ವಿರಾಟಪುರ ವಿರಾಗಿ' ಸಿನಿಮಾವಾಗಿದೆ. ಈ ಸಿನಿಮಾಗೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನವಿದೆ. ಅಶೋಕ್ ವಿ ರಾಮನ್ ಕ್ಯಾಮರಾ, ಎಸ್ ಗುಣಶೇಖರನ್ ಎಡಿಟಿಂಗ್ ಮಾಡಿದ್ದಾರೆ.