ವಯಸ್ಸಾದ ಸುದೀಪ್ ಲುಕ್ ಗೆ ಅಭಿಮಾನಿಗಳು ಫಿದಾ: ಹೊಸ ಗೆಟಪ್ ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದೇಕೆ?
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ 'ಫ್ಯಾಟಮ್' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿದ್ದು, ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರತಂಡ ಸದ್ಯ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮಾಡಿ ಮುಗಿಸಿದೆ. ಅಂದ್ಹಾಗೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಸುದೀಪ್ ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
Recommended Video
ಈ ನಡುವೆ ಕಿಚ್ಚನ ಹೊಸ ಗೆಟಪ್ ವೈರಲ್ ಆಗಿದೆ. ವಯಸ್ಸಾದ ಸುದೀಪ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಣ್ಣು ಹಣ್ಣು ಮುದುಕರಾಗಿರುವ ಸುದೀಪ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಳಿ ಕೂದಲು, ಬಿಳಿ ಗಡ್ಡ ಕನ್ನಡಕ ಧರಿಸಿರುವ ಸುದೀಪ್ ಅವರ ಮುಗ್ದತೆ, ಅಭಿನಯಕ್ಕೆ ಅಭಿಮಾನಿಗಳು ಮನಸೋತಿದ್ದಾರೆ.
ಇದೇ ಗೆಟಪ್ ನಲ್ಲಿ ಸುದೀಪ್ ಈ ಹಿಂದೆ 'ಸ್ವಾತಿ ಮುತ್ತು' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಸುದೀಪ್ ಅಭಿನಯ, ಸ್ಟೈಲ್, ಲುಕ್ ಗೆ ಚಿತ್ರಪ್ರಿಯರಿಂದ ಭಾರಿ ಮೆಚ್ಚಿಗೆ ವ್ಯಕ್ತವಾಗಿತ್ತು. ಇದೀಗ ಮತ್ತದೆ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದ್ಹಾಗೆ ಇದು ಸಿನಿಮಾದ ಹೊಸ ಲುಕ್ ಅಂತ ಭಾವಿಸಬೇಡಿ. ಸುದೀಪ್ ಜಾಹಿರಾತಿಗಾಗಿ ಈ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಫ್ಲಿಪ್ ಕಾರ್ಟ್ ಜಾಹಿರಾತಿಗಾಗಿ ಸುದೀಪ್ ವಯಸ್ಸಾದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಸುದೀಪ್ ಒಂದು ಯಂಗ್ ಲುಕ್ ನಲ್ಲಿ ಮಿಂಚಿದ್ರೆ, ಮತ್ತೊಂದು ಇಳಿ ವಯಸ್ಸಿನ ಸುದೀಪ್ ಆಗಿ ಕಾಣಿಸಿಕೊಂಡಿದ್ದಾರೆ. ಫ್ಲಿಪ್ ಕಾರ್ಟ್ ಜಾಹಿರಾತಿನಲ್ಲಿ ಭಾರತದ ಖ್ಯಾತ ಕಲಾವಿದರು ಕಾಣಿಸಿಕೊಂಡಿದ್ದಾರೆ. ಅಮಿತಾಬ್ ಬಚ್ಚನ್, ರಣಬೀರ್ ಕಪೂರ್, ದೀಪಿಕಾ ಪಡುಕೋಣೆ, ಅಲಿಯಾ ಭಟ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸೇರಿದಂತೆ ಇನ್ನು ಸಾಕಷ್ಟು ಮಂದಿ ಮಿಂಚಿದ್ದಾರೆ. ವಿಶೇಷ ಅಂದರೆ ಎಲ್ಲರೂ ಸಹ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಸುದೀಪ್ ಸದ್ಯ ಫ್ಯಾಟಮ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾ ಜೊತೆಗೆ 'ಕೋಟಿಗೊಬ್ಬ-3' ಸಿನಿಮಾ ಸಹ ರಿಲೀಸ್ ಗೆ ರೆಡಿಯಾಗಿದೆ. ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಕೋಟಿಗೊಬ್ಬ-3 ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.


Click it and Unblock the Notifications











