ಕಿಚ್ಚ ಸುದೀಪ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ಗೆ ಇಂದು ವಿಶೇಷವಾದ ದಿನ. ಹೌದು, ಸುದೀಪ್ ದಂಪತಿ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್, ಪ್ರಿಯಾ ಕೈ ಹಿಡಿದು 19ವರ್ಷ ತುಂಬಿದೆ. ಈ ದಿನವನ್ನು ಸುದೀಪ್ ದಂಪತಿ ವಿಶೇಷವಾಗಿ ಆಚರಣೆ ಮಾಡುತ್ತಿದ್ದಾರೆ.

ಸ್ಯಾಂಡಲ್ ವುಡ್ ನ ಮುದ್ದಿನ ಜೋಡಿ ಸುದೀಪ್ ಮತ್ತು ಪ್ರಿಯಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ. ಅಲ್ಲದೆ ಅಭಿಮಾನಿಗಳು ಕಿಚ್ಚ ದಂಪತಿಯ ಸುಂದರ ಫೋಟೋಗಳನ್ನು ಶೇರ್ ಮಾಡಿ ತರಹೇವಾರಿ ರೀತಿಯಲ್ಲಿ ವಿಶ್ ಮಾಡುತ್ತಿದ್ದಾರೆ.

2000ರಲ್ಲಿ ನಟ ಸುದೀಪ್, ಪ್ರಿಯಾ ರಾಧಕೃಷ್ಣರನ್ನು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಭೇಟಿಯಾಗುತ್ತಾರೆ. 2001 ಅಕ್ಟೋಬರ್ 18ರಂದು ಸುದೀಪ್ ಮತ್ತು ಪ್ರಿಯಾ ಇಬ್ಬರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರಿಯಾ ಮದುವೆಗೂ ಮೊದಲು ಏರ್ ಲೈನ್ಸ್ ಮತ್ತು ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

Sudeep And His Wife Priya To Celebrating Their 19th Wedding Anniversary

2001ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ಜೋಡಿ 2004ರಲ್ಲಿ ಮೊದಲ ಮಗುವಿನ ತಂದೆ-ತಾಯಿ ಆಗಿದ್ದಾರೆ. ಸುದೀಪ್ ಮತ್ತು ಪ್ರಿಯಾ ದಂಪತಿಗೆ ಸಾನ್ವಿ ಎನ್ನುವ ಮಗಳಿದ್ದಾರೆ. ಪ್ರಿಯ ಸದ್ಯ ಅವರದೇ ಅದ ಈವೆಂಟ್ ಮ್ಯಾನೆಜ್ ಮೆಂಟ್ ಕಂಪನಿಯನ್ನು ನೋಡಿಕೊಳ್ಳುತ್ತಿದ್ದಾರೆ.

ಸುದೀಪ್ ಸದ್ಯ ಫ್ಯಾಂಟಮ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಫ್ಯಾಂಟಮ್ ಸಿನಿಮಾ ಅದ್ದೂರಿ ಸೆಟ್, ಫಸ್ಟ್ ಲುಕ್ ಮತ್ತು ಪಾತ್ರವರ್ಗಗಳ ಮೂಲಕ ಗಮನ ಸೆಳೆಯುತ್ತಿದೆ. ಈ ಸಿನಿಮಾ ಜೊತೆಗೆ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದಾರೆ.

Recommended Video

ಉಪಾಧ್ಯಕ್ಷನ ಬೆಂಬಲಕ್ಕೆ ನಿಂತ ರಾಬರ್ಟ್ ನಿರ್ಮಾಪಕ | Upadyaksha | Chikkanna | Umapathy Srinivas

More from Filmibeat

English summary
Sudeep and his wife priya to celebrating their 19th wedding anniversary.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X