ಪುಟಾಣಿಗೆ ಅಪರೂಪದ ಕಾಯಿಲೆ; ನಾನು ಸಹಾಯ ಮಾಡ್ತೀನಿ, ನೀವು ಕೈ ಜೋಡಿಸಿ ಎಂದ ಕಿಚ್ಚ

ಸ್ಟಾರ್ ಕಲಾವಿದರು ತಮ್ಮ ಕೈಲಾದ ಸಹಾಯ ಮಾಡುತ್ತಾ ಬರುತ್ತಿದ್ದಾರೆ. ನೆಚ್ಚಿನ ನಟ, ನಟಿಯರು ಹಾದಿಯಲ್ಲಿ ಅಭಿಮಾನಿಗಳು ಕೂಡ ಅಸಹಾಯಕರಿಗೆ ನೆರವಿನ ಹಸ್ತ ಚಾಚುತ್ತಾ ಬರುತ್ತಿದ್ದಾರೆ. ಇದೀಗ ಪುಟಾಣಿ ಬಾಲಕಿಯ ಚಿಕಿತ್ಸೆಗೆ ನೆರವಾಗುವಂತೆ ನಟ ಸುದೀಪ್ ಮನವಿ ಮಾಡಿದ್ದಾರೆ.

ಕೊರೊನಾ ಸಮಯದಲ್ಲಿ ಸುದೀಪ್ ಅವರ ಕಿಚ್ಚ ಚಾರಿಟೇಬಲ್ ಸೊಸೈಟಿ ಶ್ಲಾಘನೀಯ ಸೇವೆ ಮಾಡಿತ್ತು. ಆ ಬಳಿಕ ಕೂಡ ಅದನ್ನು ಮುಂದುವರೆಸಿಕೊಂಡು ಬರ್ತಿದೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ನಟ ಸುದೀಪ್. 4 ವರ್ಷಗಳ ಹಿಂದೆ ಶಿವಮೊಗ್ಗದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. ತಮ್ಮ ಬಳಿ ಸಹಾಯ ಕೇಳಿ ಹೋಗುವವರ ನೆರವಿಗೆ ಸುದೀಪ್ ಸದಾ ನಿಲ್ಲುತ್ತಾರೆ.

Sudeep Appeals for Help to Save child Keerthana Battling Spinal Muscular Atrophy

ಸದ್ಯ ಒಂದು ವೀಡಿಯೋ ಮಾಡಿ ಕೀರ್ತನಾ ಎಂಬ ಪುಟ್ಟ ಹೆಣ್ಣು ಮಗುವಿಗೆ ಇರುವ ಅಪರೂಪದ ಕಾಯಿಲೆ ಬಗ್ಗೆ ಮಾತನಾಡಿದ್ದಾರೆ. ಅದನ್ನು ಗುಣಪಡಿಸಲು ಕೋಟ್ಯಂತರ ರೂಪಾಯಿ ಹಣ ಬೇಕು, ನಾನು ನನ್ನ ಕೈಲಾದ ಸಹಾಯ ಮಾಡಿದ್ದೀನಿ, ನೀವು ನೆರವು ನೀಡಿ ಎಂದು ಸುದೀಪ್ ಮನವಿ ಮಾಡಿದ್ದಾರೆ.

"ಈ ವೀಡಿಯೋ ನೋಡುತ್ತಿರುವ ಪ್ರತಿಯೊಬ್ಬರಿಗೂ ಕಿಚ್ಚನ ನಮಸ್ತೆ. ವೀಡಿಯೋ ಮಾಡಲು ಬಹಳ ಮುಖ್ಯವಾದ ಕಾರಣವಿದೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಅವರ ಪತ್ನಿ ನಾಗಶ್ರೀ ದಂಪತಿಗೆ 1 ವರ್ಷ 10 ತಿಂಗಳ ಪುಟ್ಟ ಮಗಳು ಇದ್ದಾಳೆ. ಆಕೆಯ ಹೆಸರು ಕೀರ್ತನಾ. ಆ ಮುದ್ಧ ಕಂದಮ್ಮನಿಗೆ spinal muscular atrophy(SMA2) ಎಂಬ ಆರೋಗ್ಯ ಸಮಸ್ಯೆ ಇದೆ. ಇದು ಬಹಳ ಅಪರೂಪದ ಆನುವಂಶಿಕ ಕಾಯಿಲೆ" ಎಂದು ಸುದೀಪ್ ಮಾತು ಆರಂಭಿಸಿದ್ದಾರೆ.

"ಈ ಕಾಯಿಲೆಗೆ ಔಷಧಿ ಇದೆ. ಗುಣ ಆಗುವ ಸಾಧ್ಯತೆಯಿದೆ. ಆದರೆ ಆ ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಹಣ ಎಷ್ಟು ಎಂದು ಕೇಳಿದಂತೆ ಮೈ ಜುಮ್ ಎನಿಸುತ್ತದೆ. ಈ ಚಿಕಿತ್ಸೆಗೆ ಬೇಕಾಗಿರುವುದು 16 ಕೋಟಿ ರೂ. ಪೋಷಕರು ಆಸ್ತಿಯನ್ನು ಮಾರಿ ಮಗುವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸಾಕಷ್ಟು ಜನ ಇದಕ್ಕೆ ಕೈ ಜೋಡಿಸಿದ್ದಾರೆ. ಸಹಾಯ ಮಾಡಲು ಮುಂದೆ ಬಂದಿದ್ದಾರೆ. ನನ್ನ ಕೈಲಾದ ಸಹಾಯ ನಾನು ಮಾಡಿದ್ದೀನಿ. ನೀವು ನಿಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಿ" ಎಂದು ಸುದೀಪ್ ಮನವಿ ಮಾಡಿದ್ದಾರೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನ ಸುದೀಪ್ ಮನವಿಗೆ ಓಗೊಟ್ಟಿದ್ದಾರೆ. ಸಹಾಯ ಮಾಡಲು ಮನಸ್ಸು ಮಾಡಿದ್ದಾರೆ. ಕಿಚ್ಚನ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ಕ್ರಿಸ್‌ಮಸ್ ಸಂಭ್ರಮದಲ್ಲಿ ತೆರೆಗೆ ಬಂದು ಗೆದ್ದಿತ್ತು. ಅಂದಾಜು 50 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು.

ಸದ್ಯ ಹೊಸ ಸಿನಿಮಾ ಆರಂಭಿಸಲು ಸುದೀಪ್ ಮುಂದಾಗಿದ್ದಾರೆ. ಅನೂಪ್ ಭಂಡಾರಿ ಜೊತೆ ಸೇರಿ 'ಬಿಲ್ಲ ರಂಗ ಬಾಷ' ಚಿತ್ರದಲ್ಲಿ ನಟಿಸೋಕೆ ಮುಂದಾಗಿದ್ದಾರೆ. ಏಪ್ರಿಲ್‌ನಲ್ಲೇ ಈ ಸಿನಿಮಾ ಶುರುವಾಗುವ ಸಾಧ್ಯತೆಯಿದೆ. ದೊಡ್ಡಮಟ್ಟದಲ್ಲಿ ಸಿನಿಮಾ ಪ್ಲ್ಯಾನ್ ನಡೀತಿದೆ. ಬಹುಕೋಟಿ ವೆಚ್ಚದಲ್ಲಿ 5 ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. 'ಮ್ಯಾಕ್ಸ್' ಸೀಕ್ವೆಲ್ ಮಾಡುವ ಬಗ್ಗೆಯೂ ಚರ್ಚೆ ನಡೀತಿದೆ. ವಿಜಯರ್ ಕಾರ್ತಿಕೇಯನ್ ಈಗಾಗಲೇ ಕಥೆ ಬರೆಯಲು ಆರಂಭಿಸಿದ್ದಾರೆ.

More from Filmibeat

English summary
Kannada Actor Kichcha Sudeep's Heartfelt Plea to Help Keerthana Fight a Life-Threatening Disease
Read more about: sudeep sandalwood kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X