ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಜೋಡಿಗೆ ಶುಭಹಾರೈಸಿದ ಕಿಚ್ಚ ಸುದೀಪ್

ಸ್ಯಾಂಡಲ್ ವುಡ್ ರೊಮ್ಯಾಂಟಿಕ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಇತ್ತೀಚಿಗೆ ಮದುವೆ ದಿನಾಂಕವನ್ನು ಬಹಿರಂಗ ಪಡಿಸಿದ್ದಾರೆ. 6 ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಲವ್ ಮಾಕ್ಟೇಲ್ ಅಂತಹ ಸೂಪರ್ ಹಿಟ್ ಸಿನಿಮಾ ನೀಡಿದ ಬಳಿಕ ಈ ಜೋಡಿ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಇದೀಗ ವಿಶೇಷವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಮದುವೆ ದಿನಾಂಕವನ್ನು ರಿವೀಲ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಜೋಡಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳು ಹರಿದು ಬರುತ್ತಿವೆ. ಈ ಮುದ್ದಾದ ಜೋಡಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ಸ್ ಬರುತ್ತಿವೆ.

ವಿಶೇಷ ಎಂದರೆ ಈ ರೊಮ್ಯಾಂಟಿಕ್ ಜೋಡಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ವಿಶ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿರುವ ಸುದೀಪ್, 'ಫೆಬ್ರವರಿ 14ಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ ನಿಮ್ಮಬ್ಬರಿಗೂ ಶುಭಹಾರೈಕೆಗಳು. ನೀವು ಯಾವಾಗಲು ಹೀಗೆ ಖುಷಿಯಾಗಿ ಜೊತೆಯಾಗಿರಿ' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಜೊತೆಗೆ ಇಬ್ಬರ ಫೋಟೋವನ್ನು ಶೇರ್ ಮಾಡಿದ್ದಾರೆ.

Sudeep Best Wishes to Darling Krishna and Milana Nagaraj

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಇಬ್ಬರು ಮುಂದಿನ ವರ್ಷ ಫೆಬ್ರವರಿ 14ರಂದು ಹಸೆಮಣೆ ಏರುತ್ತಿದ್ದಾರೆ. ಪ್ರೇಮಿಗಳ ದಿನಾಚರಣೆಯ ದಿನವೇ ಹೊಸಜೀನಕ್ಕೆ ಕಾಲಿಡುತ್ತಿರುವುದು ವಿಶೇಷ. ಇಬ್ಬರ ಮದುವೆ ಬೆಂಗಳೂರಿನಲ್ಲೇ ನಡೆಯಲಿದ್ದು, ಕುಟುಂಬದವರು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ.

Recommended Video

ಇವನ ಬೆನ್ನು ತಟ್ಟಿ ಆಶೀರ್ವಾದ ಮಾಡಿ | NodidavaruEnantare | Umapathy Srinivas | Filmibeat Kannada

More from Filmibeat

English summary
Kannada Actor Sudeep Best wishes to Darling Krishna and Milana Nagaraj.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X