ನಿಮ್ಮ ಅನುಪಸ್ಥಿತಿ ತುಂಬಾ ಕಾಡುತ್ತಿದೆ ಮಾಮ : ಕಿಚ್ಚ ಸುದೀಪ್
Recommended Video
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬದ ಈ ಸಮಯದಲ್ಲಿ ಅಂಬರೀಶ್ ನೆನೆದು ಭಾವುಕ ಟ್ವೀಟ್ ಮಾಡಿದ್ದಾರೆ. ಸ್ಯಾಂಡಲ್ ವುಡ್ ಕರ್ಣನಿಗೆ ಇಂದು 67ನೇ ಹುಟ್ಟುಹಬ್ಬ. ಮೊದಲ ಬಾರಿಗೆ ಅಂಬಿ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ.
ಅಂಬಿ ಇಲ್ಲದ ಈ ದಿನವನ್ನು ಅಭಿಮಾನಿಗಳಿಗೆ, ಸ್ನೇಹಿತರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೋವಿನಲ್ಲಿಯೇ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ರೆಬೆಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಚಿತ್ರರಂಗದ ಅನೇಕ ಸ್ಟಾರ್ಸ್ ಶುಭಾಶಯತಿಳಿಸುತ್ತಿದ್ದಾರೆ.
ಅಂಬಿ ಮಾಮನಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ವಿಶ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಹೆಚ್ಚು ಇಷ್ಟಪಡುತ್ತಿದ್ದ ವ್ಯಕ್ತಿಗಳಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು. ಅಂಬರೀಶ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವ ಕಿಚ್ಚ ಜಲೀಲನನ್ನು ನೆನೆದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ

"ನಿಮ್ಮ ಅನುಪಸ್ಥಿತಿ ತುಂಬಾ ಕಾಡುತ್ತಿದೆ ಮಾಮ. ಮೇ 29 ಯಾವಾಗಲು ಮೊದಲಿನಂತೆ ಇರಲ್ಲ" ಎಂದು ಹೇಳಿದ್ದಾರೆ.
ಕಿಚ್ಚ ಸುದೀಪ್ ಕೊನೆಯದಾಗಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಜೊತೆ 'ಅಂಬಿ ನಿಂಗೆ ವಯಸಾಯ್ತೊ' ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ನಿರ್ಮಾಣದಲ್ಲಿ ಮೂಡಿಬಂದ ಚಿತ್ರ ಇದಾಗಿದೆ.


Click it and Unblock the Notifications











