ಚಾಮರಾಜನಗರ ದುರಂತ: ಮೃತ ಕುಟುಂಬಗಳ ನೆರವಿಗೆ ಧಾವಿಸಿದ ಸುದೀಪ್

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಸರ್ಕಾರದಿಂದ ಮೃತ ಕುಟುಂಬಗಳಿಗೆ ಯಾವುದೇ ಪರಿಹಾರ, ಸಾಂತ್ವನವೂ ಸಿಕ್ಕಿಲ್ಲ. ಆದರೆ, ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಮೃತ ಕುಟುಂಬಗಳ ಸಹಾಯಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ; ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಮೂಲಕ ಮೃತ ಕುಟುಂಬಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ನಟ ಸುದೀಪ್.

Sudeep Helps Families of Charamarajanagar Oxygen Tragedy Victims

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಂಡ ಎಲ್ಲಾ 24 ಮೃತರ ಮನೆಗಳಿಗೆ ಭೇಟಿ ನೀಡಿದ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಸದಸ್ಯರು, ಸುದೀಪ್ ಪರವಾಗಿ ಸಾಂತ್ವನ ತಿಳಿಸಿದ್ದಾರೆ.

ಮೃತ ಕುಟುಂಬಗಳಿಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಾಗಿ, ಕುಟುಂಬದ ಜೊತೆ ಸದಾ ಇರುವುದಾಗಿ ಸುದೀಪ್ ಭರವಸೆ ನೀಡಿದ್ದಾರೆ. ಮೃತ ಕುಟುಂಬಕ್ಕೆ ಆರ್ಥಿಕವಾಗಿ, ಕುಟುಂಬದ ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ನೆರವು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Recommended Video

ಶಂಖನಾದ ಅರವಿಂದ್ ಸಾವಿಗೆ ಭಾವುಕರಾದ ಪುನೀತ್ ರಾಜಕುಮಾರ್ | Filmibeat Kannada

ಎರಡು ವಾರಗಳಿಂದ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಖಾಸಗಿ ಕಾರ್ಯಕ್ರಮದ ನಿರೂಪಣೆಯಿಂದಲೂ ಹಿಂದೆ ಸರಿದಿದ್ದರು. ಇನ್ನುಳಿದಂತೆ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ಮೂಲಕ ಸುದೀಪ್ ಅವರು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

More from Filmibeat

English summary
Kichcha Sudeep Charitable Society Helps Families of Charamarajanagar Oxygen Tragedy Victims.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X