'ಸೈರಾ' ಕೊನೆಯ ಹಂತದ ಚಿತ್ರೀಕರಣದಲ್ಲಿ ಸುದೀಪ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯ ಚಿತ್ರಗಳೂ ಕಿಚ್ಚನ ಕೈಯಲ್ಲಿವೆ. ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸುದೀಪ್ ಪೈಲ್ವಾನ್ ಚಿತ್ರೀಕರಣ ಮುಗಿಸಿ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
ಇದರ ಜೊತೆಗೆ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ. ಈಗ ಸುದೀಪ್ ಅವರ ಕೊನೆಯ ಹಂತದ ಚಿತ್ರೀಕರಣ ಹೈದ್ರಾಬಾದ್ ನಲ್ಲಿ ನಡೆಯುತ್ತಿದೆ. ಈ ಬಗ್ಗೆ ಸುದೀಪ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
'ಸೈರಾ ಚಿತ್ರದಲ್ಲಿ ನನ್ನ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಚಿತ್ರತಂಡದ ಜೊತೆ ಅಮೂಲ್ಯ ಕ್ಷಣವನ್ನು ಕಳೆದಿದ್ದೇನೆ. ಸೈರಾ ತಂಡ ಅದ್ಭುತ ತಂತ್ರಜ್ಞರು ಮತ್ತು ಕಲಾವಿದರನ್ನು ಹೊಂದಿದೆ. ನಿರ್ದೇಶಕ ಸುಂದರ್ ಈ ಪ್ರಾಜೆಕ್ಟ್ ಅನ್ನು ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ನಿರ್ದೇಶಕರಾಗಿ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಬಳಗವೇ ಇದೆ. ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ವಿಜಯ್ ಸೇತುಪತಿ, ಜಗಪತಿಬಾಬು, ನಯನತಾರಾ ಮತ್ತು ತಮನ್ನಾ ಕಾಣಿಸಿಕೊಂಡಿದ್ದಾರೆ.

200 ಕೋಟಿಗೂ ಅಧಿಕ ವೆಚ್ಚದಲ್ಲಿ ತಯಾರಾಗುತ್ತಿರುವ ಸೈರಾ ಸಿನಿಮಾಗೆ ನಟ ಮತ್ತು ನಿರ್ಮಾಪಕ ರಾಮ್ ಚರಣ್ ಬಂಡವಾಳ ಹೂಡಿದ್ದಾರೆ.


Click it and Unblock the Notifications











