For Quick Alerts
  ALLOW NOTIFICATIONS  
  For Daily Alerts

  ಶಿವಮೊಗ್ಗ ಗಣಿಗಾರಿಕೆ ಸ್ಥಳದಲ್ಲಿ ಸ್ಫೋಟ: ಕಿಚ್ಚ ಸುದೀಪ್ ಪ್ರತಿಕ್ರಿಯೆ

  |

  ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.

  ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ ಲಾರಿಯಲ್ಲಿದ್ದ ಕಾರ್ಮಿಕರ ಮೃತದೇಹ ಗುರುತೇ ಸಿಗದಹಾಗೆ ಛಿದ್ರ ಛಿದ್ರವಾಗಿದೆ.

  ಆರ್ಕೆಸ್ಟ್ರಾ ಕಲಾವಿದರ ಹೋರಾಟಕ್ಕೆ ನನ್ನ ಬೆಂಬಲ ಇದೆ: ಕಿಚ್ಚ ಸುದೀಪ್

  ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.

  'ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.

  ಧ್ರುವ ಸರ್ಜಾಗೆ ನಿಜಕ್ಕೂ ಮೈಲೇಜ್ ಕೊಡುತ್ತಾ ಪೊಗರು | Fimibeat Kannada

  ಸುದೀಪ್ ಟ್ವೀಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಮೃತ ಬಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಮೃತ ಕುಟುಂಬಕ್ಕೆ ಸರ್ಕಾರದ ಎಲ್ಲಾ ಸೌಲಭ್ಯ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.

  English summary
  Actor Sudeep offer condolence to victims of stone quarry blast in shivamogga.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X