For Quick Alerts
  ALLOW NOTIFICATIONS  
  For Daily Alerts

  ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಆದರೆ ಮಾರ್ಚ್ 7ರ ವರೆಗೂ ಕಾಯಲೇ ಬೇಕು

  |

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಬಿಗ್ ಬಾಸ್ ಗೆ ಗ್ರ್ಯಾಂಡ್ ಓಪನಿಂಗ್ ಆಗಿದ್ದು, ಈಗಾಗಲೇ ಶೋ ಪ್ರಾರಂಭವಾಗಿದೆ. ಈ ನಡುವೆ ಅಭಿನಯ ಚಕ್ರವರ್ತಿ ಸಿನಿಮಾಗಳಲ್ಲೂ ನಿತರಾಗಿದ್ದಾರೆ. ವಿಕ್ರಾಂತ್ ರೋಣ ಮತ್ತು ಕೋಟಿಗೊಬ್ಬ-3 ಚಿತ್ರೀಕರಣ ಮುಗಿಸಿರುವ ಕಿಚ್ಚ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.

  ಸದ್ಯ ಕೋಟಿಗೊಬ್ಬ-3 ಸಿನಿಮಾದ ರಿಲೀಸ್ ಗೆ ತಯಾರಿ ನಡೆಯುತ್ತಿದ್ದು, ಈಗಾಗಲೇ ಹಾಡು ಮತ್ತು ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚನ ಸಿನಿಮಾದ ಅಪ್ ಡೇಟ್ ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಇದೀಗ ಸಿಹಿ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ವಿಕ್ರಾಂತ್ ರೋಣನನ್ನು ನೋಡಿ ಫುಲ್ ಖುಷ್ ಆಗಿದ್ದ ಫ್ಯಾನ್ಸ್ ಸದ್ಯ ಕೋಟಿಗೊಬ್ಬನ ದರ್ಶನಕ್ಕಾಗಿ ಕಾಯುತ್ತಿದ್ದಾರೆ.

  ಬಾಡಿ ಶೇಮಿಂಗ್ ಅನುಭವ ಬಿಚ್ಚಿಟ್ಟು ಕಣ್ಣೀರು ಹಾಕಿದ ದಿವ್ಯ ಸುರೇಶ್

  ಅಭಿಮಾನಿಗಳ ಆಸೆಯಂತೆ ಕೋಟಿಗೊಬ್ಬ-3 ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಇದೆ ತಿಂಗಳು ಮಾರ್ಚ್ 7ರಂದು ಬಹುನಿರೀಕ್ಷೆಯ ಸಿನಿಮಾದ ಮೇಕಿಂಗ್ ವಿಡಿಯೋ ಬಿಡುಗಡೆಯಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಚಿತ್ರದ ಮೇಕಿಂಗ್ ವಿಡಿಯೋ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗುತ್ತಿದೆ.

  ತರುಣ್ ಸುಧೀರ್ ಗೆ ಮದುವೆ ಮಾಡಿಸುತ್ತಾರಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ | Tharun Sudhir is all set to tie Knot

  ಕೋಟಿಗೊಬ್ಬ-3 ಸಿನಿಮಾ ಶಿವ ಕಾರ್ತಿಕ್ ಸಾರಥ್ಯದಲ್ಲಿ ಮೂಡಿಬರುತ್ತಿದೆ. ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹಾಕಿದ್ದಾರೆ. ಸುದೀಪ್ ಗೆ ನಾಯಕಿಯಾಗಿ ಮಡೋನ್ನಾ ಸೆಬಾಸ್ಟಿನ್ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಚಿತ್ರದಲ್ಲಿ ರವಿಶಂಕರ್, ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

  English summary
  Sudeep starrer kotigobba-3 movie making video will release on March 7th.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X