For Quick Alerts
  ALLOW NOTIFICATIONS  
  For Daily Alerts

  ಸೆನ್ಸಾರ್ ನಲ್ಲಿ ಪಾಸಾದ 'ಮಾಣಿಕ್ಯ' ಮೇ 1ಕ್ಕೆ ರಿಲೀಸ್

  By Rajendra
  |

  'ಮಾಣಿಕ್ಯ' ಚಿತ್ರಕ್ಕೆ ಸಾಕಷ್ಟು ಸಮಯ ವ್ಯಯಿಸಿ ಇದೀಗ ಅದನ್ನು ತೆರೆಗೆ ತರುತ್ತಿದ್ದಾರೆ ಕಿಚ್ಚ ಸುದೀಪ್. ಇದೇ ಮೇ 1ರಂದು ಮಾಣಿಕ್ಯ ಚಿತ್ರ ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದ ಆಕ್ಷನ್ ಕಟ್ ಜೊತೆಗೆ ಕಥೆ, ಚಿತ್ರಕಥೆಯನ್ನೂ ಸುದೀಪ್ ಅವರೇ ಹೆಣೆದಿರುವುದು ವಿಶೇಷ.

  ಸೆನ್ಸಾರ್ ಮಂಡಳಿಯಲ್ಲಿ ಮಾಣಿಕ್ಯ ಚಿತ್ರ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ರಾಜ್ಯದಲ್ಲಿ ಬಿಡುಗಡೆಯಾದ ಒಂದು ವಾರದ ಬಳಿಕ 12 ದೇಶಗಳಲ್ಲಿ ಬಿಡುಗಡೆ ಮಾಡುವುದಾಗಿ ಸುದೀಪ್ ತಿಳಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿರುವ ಅವರು, "ರಾಮಾಯಣ ಮಹಾಭಾರತವನ್ನು ನಿರ್ದೇಶಿಸಿದ ಅನುಭವ ತಮಗಾಯಿತು" ಎಂದಿದ್ದಾರೆ.

  ಕಳೆದ ಒಂಬತ್ತು ತಿಂಗಳಿಂದ ಈ ಚಿತ್ರಕ್ಕಾಗಿ ತಮ್ಮ ತಂಡ ಸಾಕಷ್ಟು ಬೆವರುಹರಿಸಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ಕೃತಜ್ಞತೆಗಳನ್ನು ತಿಳಿಸಿರುವ ಸುದೀಪ್, ಶನಿವಾರದಿಂದಲೇ (ಏ.26) ಪ್ರಚಾರ ಆರಂಭಿಸುತ್ತಿದ್ದಾರೆ. ನಲ್ಲ ಸುದೀಪ್ ಹಾಗೂ ಮಲ್ಲ ರವಿಚಂದ್ರನ್ ಕಾಂಬಿನೇಷನಲ್ಲಿ ಬರುತ್ತಿರುವ ಚಿತ್ರವಿದು.

  ತೆಲುಗಿನ ಯಶಸ್ವಿ ಚಿತ್ರ ಮಿರ್ಚಿ ರಿಮೇಕ್ ಇದಾಗಿದೆ. ಮೂಲ ಚಿತ್ರದಲ್ಲಿ ಪ್ರಭಾಸ್, ಸತ್ಯರಾಜ್, ಅನುಷ್ಕಾ ಶೆಟ್ಟಿ, ರಿಚಾ ಗಂಗೋಪಾಧ್ಯಾಯ ಮುಂತಾದವರು ಅಭಿನಯಿಸಿದ್ದರು. ಸುಮಾರು ರು.30 ಕೋಟಿ ಬಜೆಟ್ ನಲ್ಲಿ ನಿರ್ಮಿಸಿದ್ದ 'ಮಿರ್ಚಿ' ಚಿತ್ರ ಬಾಕ್ಸ್ ಆಫೀಸಲ್ಲಿ ರು.103 ಕೋಟಿ ಗಳಿಸಿ ದಾಖಲೆ ನಿರ್ಮಿಸಿದೆ.

  ಅರ್ಜುನ್ ಜನ್ಯ ಸಂಗೀತವಿರುವ ಚಿತ್ರದ ಪಾತ್ರವರ್ಗದಲ್ಲಿ ರಮ್ಯಕೃಷ್ಣ ಸಹ ಇದ್ದಾರೆ. ಪಾತ್ರವರ್ಗದಲ್ಲಿ ರಮ್ಯಾ ಕೃಷ್ಣ, ವರಲಕ್ಷ್ಮಿ ಶರತ್ ಕುಮಾರ್, ಸಾಧುಕೋಕಿಲ, ಶೋಭರಾಜ್, ರವಿಶಂಕರ್ ಮುಂತಾದ ಕಲಾವಿದರು ಇದ್ದಾರೆ. (ಒನ್ಇಂಡಿಯಾ ಕನ್ನಡ)

  English summary
  Kichcha Sudeep's 'Maanikya' film has been passed by the Censor Board Of Film Certification with a ‘UA’ certificate. The movie is all set to release on 1st May, 2014.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X