Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚನ ಅಭಿಮಾನಿಗಳಿಗೆ ಸಂತಸದ ಸುದ್ದಿ: ಬರ್ತಿದೆ 'ಪೈಲ್ವಾನ್' ಟ್ರೈಲರ್
Recommended Video
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಪೈಲ್ವಾನ್ ಚಿತ್ರದ ಟ್ರೈಲರ್ ರಿಲೀಸ್ ಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೆ ಹಾಡುಗಳು ಮತ್ತು ಟೀಸರ್ ಮೂಲಕ ಸದ್ದು ಮಾಡುತ್ತಿರುವ ಪೈಲ್ವಾನ್ ಈಗ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ.
ಹೌದು, ಪೈಲ್ವಾನ್ ಟ್ರೈಲರ್ ರಿಲೀಸ್ ಗೆ ಡೇಟ್ ಮತ್ತು ಟೈಂ ಫಿಕ್ಸ್ ಆಗಿದೆ. ಆಗಸ್ಟ್ 22ಕ್ಕೆ ಚಿತ್ರದ ಟ್ರೈಲರ್ ತೆರೆಗೆ ಬರುತ್ತಿದೆ. ನಾಳೆ 1 ಗಂಟೆಗೆ ರಿಲೀಸ್ ಆಗುತ್ತಿದೆ. ವಿಶೇಷ ಅಂದ್ರೆ ಟ್ರೈಲರ್ ಐದು ಭಾಷೆಯಲ್ಲೂ ರಿಲೀಸ್ ಆಗುತ್ತಿದೆ.
'ಏಕಾಂಗಿ' ಎಲ್ಲಾ ಬಿಟ್ಟಾಕಿ, ನಿಮ್ ಸ್ಟೈಲ್ ಸಿನಿಮಾ ಮಾಡಿ: ಸುದೀಪ್
ಈ ಬಗ್ಗೆ ಮಾಹಿತಿ ಬಹಿರಂಗ ಪಡಿಸುವ ಜೊತೆಗೆ ಕಿಚ್ಚ ಸುದೀಪ್ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಪೈಲ್ವಾನ್ ಅಬ್ಬರ ನೋಡಲು ಕಾಯುತ್ತಿರುವ ಅಭಿಮಾನಿಗಳಿಗೆ ಟ್ರೈಲರ್ ರಿಲೀಸ್ ಆಗುತ್ತಿರುವ ವಿಚಾರ ಕೇಳಿ ಸಖತ್ ಥ್ರಿಲ್ ಆಗಿದ್ದಾರೆ.
ಮೊದಲ ಬಾರಿಗೆ ಪೈಲ್ವಾನ್ ಆಗಿ ಮಿಂಚಿರುವ ಅಭಿನಯ ಚಕ್ರವರ್ತಿಯನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಚಿತ್ರಕ್ಕಾಗಿ ಸಖತ್ ವರ್ಕೌಟ್ ಮಾಡಿ ಮೊದಲ ಬಾರಿಗೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪೈಲ್ವಾನ್ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ. ಇತ್ತೀಚಿಗಷ್ಟೆ ಚಿತ್ರದ ಆಡಿಯೋವನ್ನು ಅದ್ದೂರಿಯಾಗಿ ರಿಲೀಸ್ ಮಾಡಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಆಡಿಯೋ ರಿಲೀಸ್ ಮಾಡಿದ್ದಾರೆ. ಸ್ಯಾಂಡಲ್ ವುಡ್ ಮಾತ್ರವಲ್ಲದೆ ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಕುತೂಹಲ ಮೂಡಿಸಿದೆ ಪೈಲ್ವಾನ್.