Vikranth Rona Teaser: 'ವಿಕ್ರಾಂತ್ ರೋಣ' ಬಿಡುಗಡೆ ಯಾವಾಗ? ಏಪ್ರಿಲ್ 2 ಕ್ಕೆ ಸಿಗಲಿದೆ ಉತ್ತರ

ಪೈಲ್ವಾನ್' ಹಾಗೂ 'ದಬಂಗ್-3' ಚಿತ್ರಗಳ ಬಳಿಕ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್ ನೀಡಿ ನಟಿಸಿರುವ ಸಿನಿಮಾ 'ವಿಕ್ರಾಂತ್ ರೋಣ'. ಸ್ಯಾಂಡಲ್‌ವುಡ್‌ಗೆ 'ರಂಗಿತರಂಗ' ದಂತಹ ಸೂಪರ್ ಹಿಟ್ ಚಿತ್ರವನ್ನು ಕೊಟ್ಟಿರುವ ನಿರ್ದೇಶಕ ಅನೂಪ್ ಭಂಡಾರಿ 'ವಿಕ್ರಾಂತ್ ರೋಣ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಫ್ಯಾಂಟಸಿ, ಆಕ್ಷನ್, ಅಡ್ವೆಂಚರ್, ಥ್ರಿಲ್ಲರ್ ಅಂಶಗಳಿರುವ 'ವಿಕ್ರಾಂತ್ ರೋಣ' ಸಿನಿಮಾದ ಬಿಡುಗಡೆ ದಿನಾಂಕ ಇನ್ನೂ ನಿಗದಿ ಆಗಿಲ್ಲ. ಅಭಿಮಾನಿಗಳು ಸುದೀಪ್ ಅವರನ್ನು ಯಾವಾಗ ತೆರೆಮೇಲೆ ನೋಡುತ್ತೇವೆ ಎಂಬ ಬಗ್ಗೆ ಉತ್ಸುಕರಾಗಿದ್ದಾರೆ. ಇದೀಗ ಈ ಬಗ್ಗೆ ಸ್ವತಃ 'ವಿಕ್ರಾಂತ್ ರೋಣ' ತಂಡದಿಂದ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಒಂದು ಹೊರ ಬಂದಿದೆ.

ಎಲ್ಲಾ ಅಂದುಕೊಂಡಂತೇ ಆಗಿದ್ದರೇ 'ವಿಕ್ರಾಂತ್ ರೋಣ' ಸಿನಿಮಾ ಈ ಹಿಂದೆಯೆ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ರಿಲೀಸ್ ಆಗಲು ಸಾಧ್ಯ ವಾಗಿಲ್ಲ. ಹೀಗಾಗಿ ಫ್ಯಾನ್ಸ್ ಕೂಡ ನಿರಾಶರಾಗಿದ್ದರು. ಇನ್ನೇನು ಕೆಲವೇ ದಿನದಲ್ಲಿ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ಸ್ವತಃ ಚಿತ್ರತಂಡವೆ ಕ್ಲೂ ನೀಡಿದೆ. ಏಪ್ರೀಲ್ 2ರಂದು 'ವಿಕ್ರಾಂತ್ ರೋಣ' ಚಿತ್ರದ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾಗಲಿದೆ. ಹಾಗೇ ಈ ಟೀಸರ್ ನಲ್ಲಿ 'ವಿಕ್ರಾಂತ್ ರೋಣ' ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ. ಏಪ್ರಿಲ್ 2ರ ವರೆಗೆ ಕಾದರೆ 'ವಿಕ್ರಾಂತ್ ರೋಣ' ಚಿತ್ರದ ರಿಲೀಸ್ ಡೇಟ್ ಗೊತ್ತಾಗಲಿದೆ.

ಇನ್ನು ಈ ರಿಲೀಸ್ ಡೇಟ್ ಟೀಸರ್ ಏಪ್ರಿಲ್ 2ರಂದು ಬೆಳಗ್ಗೆ 9.55ಕ್ಕೆ ರಿಲೀಸ್ ಆಗಲಿದೆ. ಈ ಸುದ್ದಿ ತಿಳಿದು ಫ್ಯಾನ್ಸ್ ಇದೀಗ ಫುಲ್ ಖುಷ್ ಆಗಿದ್ದಾರೆ. ಆದಷ್ಟು ಬೇಗ ರಿಲೀಸ್ ಡೇಟ್ ತಿಳಿದುಕೊಳ್ಳಲು ಕಾತುರರಾಗಿದ್ದಾರೆ. ಇನ್ನು 'ವಿಕ್ರಾಂತ್ ರೋಣ' ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದೆ. 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಮಧುಸೂದನ್ ರಾವ್, ವಾಸುಕಿ ವೈಭವ್ ಮುಂತಾದವರು ಅಭಿನಯಿಸಿದ್ದಾರೆ.

Sudeep Starrer Vikrant Rona Movie Teaser Releasing On April 02

ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿರುವ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ 'ವಿಕ್ರಾಂತ್ ರೋಣ' ಸಿನಿಮಾ ಕನ್ನಡ, ಇಂಗ್ಲೀಷ್ ಸೇರಿದಂತೆ 10 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈಗಾಗಲೆ ಹೇಳಿಕೊಂಡಿದೆ. ಇಂಗ್ಲಿಷ್ ವರ್ಷನ್ ಸಿನಿಮಾಗೂ ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ವಾಯ್ಸ್ ಡಬ್ ಮಾಡಿದ್ದರು. ಇನ್ನು 3D ವರ್ಷನ್‌ನಲ್ಲಿ 'ವಿಕ್ರಾಂತ್ ರೋಣ' ಸಿನಿಮಾ ತೆರೆಕಾಣಲಿದೆ.

3D ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾ ಬಗ್ಗೆ ಸುದೀಪ್ ಬಹಳ ಸಂತಸ ವ್ಯಕ್ತಪಡಿಸಿದ್ದರು. ಈ ಹಿಂದೆ 3D ವರ್ಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ, ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸುದೀಪ್ ಟ್ವೀಟ್ ಮಾಡಿದ್ದರು.ಇನ್ನು ಕಿಚ್ಚ ಸುದೀಪ್ ತಾವು 'ವಿಕ್ರಾಂತ್ ರೋಣ' ನಿರ್ದೇಶಕ ಅನುಪ್ ಭಂಡಾರಿ ಜೊತೆ ಮತ್ತೊಂದು ಹೊಸ ಸಿನಿಮಾ ಮಾಡುವುದಾಗಿ ಈ ಹಿಂದೆ ಹೇಳಿಕೊಂಡಿದ್ದಾರೆ. ಸದ್ಯ ಮೊದಲಿಗೆ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾತುರರಾಗಿದ್ದಾರೆ.

More from Filmibeat

English summary
Actor Sudeep Starrer Vikrant Rona movie release date on April 2nd. here is more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X