50 ದೇಶ, 6 ಭಾಷೆಯಲ್ಲಿ ಸುದೀಪ್ 'ವಿಕ್ರಾಂತ್ ರೋಣ' ಬಿಡುಗಡೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಟೀಸರ್ ಭರ್ಜರಿ ರೆಸ್‌ಪಾನ್ಸ್ ಪಡೆದುಕೊಂಡಿದೆ. ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸುದೀಪ್ ಅವರ ಕಟೌಟ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಆರಂಭಿಕ ಹಂತದಿಂದಲೂ ನಿರೀಕ್ಷೆ ಮೂಡಿಸಿಕೊಂಡು ಬಂದಿರುವ ವಿಕ್ರಾಂತ್ ರೋಣ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎನ್ನುವುದಕ್ಕೆ ಸ್ಪಷ್ಟ ಉತ್ತರ ಇನ್ನು ಸಿಕ್ಕಿಲ್ಲ. ಏಕಂದ್ರೆ, ಮೊದಲು ಕೋಟಿಗೊಬ್ಬ 3 ಸಿನಿಮಾ ತೆರೆಕಾಣಬೇಕಿದೆ. ಆಮೇಲೆ ವಿಕ್ರಾಂತ್ ರೋಣ ಚಿತ್ರಮಂದಿರಕ್ಕೆ ಬರಲಿದೆ.

ಈಗಾಗಲೇ, ವಿಕ್ರಾಂತ್ ರೋಣ ಚಿತ್ರದ ಪ್ರಚಾರ ಜೋರಾಗಿ ಶುರುವಾಗಿದೆ. ಬುರ್ಜ್ ಖಲೀಫಾ ಮೇಲೆ ಟೀಸರ್ ಲಾಂಚ್ ಮಾಡಿದ ಚಿತ್ರತಂಡ ಆರು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಖಚಿತ ಪಡಿಸಿದೆ.

 Sudeep Starrer vikranth rona releasing in 6 language

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ವಿಕ್ರಾಂತ್ ರೋಣ ತೆರೆಗೆ ಬರಲಿದೆ. ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ 50ಕ್ಕೂ ಹೆಚ್ಚು ದೇಶಗಳಲ್ಲಿ ಸುದೀಪ್ ಸಿನಿಮಾ ಪ್ರದರ್ಶನವಾಗಲಿದೆ ಎಂದು ಅಧಿಕೃತವಾಗಿ ಪ್ರಕಟವಾಗಿದೆ.

ಆರು ಭಾಷೆಯಲ್ಲಿ ವಿಕ್ರಾಂತ್ ರೋಣ ಬರಲಿದೆ ಎನ್ನುವುದನ್ನು ಸ್ವತಃ ಸುದೀಪ್ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆರು ಭಾಷೆಯ ಟೈಟಲ್ ಪೋಸ್ಟರ್ ಪೋಸ್ಟ್ ಮಾಡಿಕೊಂಡಿದ್ದಾರೆ.

ಇನ್ನುಳಿದಂತೆ ಅನೂಪ್ ಭಂಡಾರಿ ಈ ಚಿತ್ರ ನಿರ್ದೇಶನ ಮಾಡಿದ್ದು, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ನಿರೂಪ್ ಭಂಡಾರಿ, ನೀತು ಅಶೋಕ್, ಮಧುಸೂದನ್ ರಾವ್, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

More from Filmibeat

English summary
Kiccha Sudeep starrer vikranth rona movie set to release in 6 language across 50 countries.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X