ಉಪೇಂದ್ರ 'ಕಬ್ಜ' ಚಿತ್ರೀಕರಣ: ಸುದೀಪ್ ಎಂಟ್ರಿಗೆ ಸಮಯ ನಿಗದಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಸಿನಿಮಾಗಳ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಕಿಚ್ಚ ಸದ್ಯ 'ಕೋಟಿಗೊಬ್ಬ-3' ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಜೊತೆಗೆ ವಿಕ್ರಾಂತ್ ರೋಣ ಟಾಕಿ ಭಾಗದ ಚಿತ್ರೀಕರಣ ಮುಗಿಸಿದ್ದು ಹಾಡಿನ ಚಿತ್ರೀಕರಣಕ್ಕೆ ಕಾಯುತ್ತಿದ್ದಾರೆ.
Recommended Video
ಈ ಎರಡು ಸಿನಿಮಾಗಳ ಜೊತೆಗೆ ಅಭಿನಯ ಚಕ್ರವರ್ತಿ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ರಿಯಲ್ ಸ್ಟಾರ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ನಿದ್ದೆ ಗೆಡಿಸಿದೆ.
ಅಂದಹಾಗೆ ಕಬ್ಜ ಸಿನಿಮಾದಲ್ಲಿ ಕಿಚ್ಚ ಸುದೀಪ್ ಭಾರ್ಗವ ಭಕ್ಷಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಕಬ್ಜ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಭರ್ಜರಿ ಸೆಟ್ ಗಳನ್ನು ಹಾಕಿದ್ದು, ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದೆ. ಸುಮಾರು ಎರಡು ತಿಂಗಳುಗಳ ಕಾಲ ಆಕ್ಷನ್ ಮತ್ತು ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಎಂಟ್ರಿಗೂ ಸಮ ನಿಗದಿಯಾಗಿದೆ. ಮುಂದಿನ ತಿಂಗಳು ಸುದೀಪ್ ಭಾರ್ಗವ ಭಕ್ಷಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ರೆಟ್ರೋ ಶೈಲಿಯಲ್ಲಿರುವ ಪಾತ್ರದಲ್ಲಿ ಕಿಚ್ಚನ ಪಾತ್ರ ಹೇಗೆ ಮೂಡಿಬರಲಿದೆ ಎನ್ನುವುದು ಅಭಿಮಾನಿಗಳ ಸದ್ಯದ ಕುತೂಹಲ.
ಇನ್ನು ಇತ್ತೀಚಿಗಷ್ಟೆ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಕೊನೆಯಲ್ಲಿ ಕೋಟಿಗೊಬ್ಬ-3 ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಆದರೆ ಇನ್ನು ಅಧಿಕೃತವಾಗಿ ಬಿಡುಗಡೆ ದಿನಾಂಕ ಇನ್ನು ಬಹಿರಂಗವಾಗಿಲ್ಲ.


Click it and Unblock the Notifications











