ಸಂಗೊಳ್ಳಿ ರಾಯಣ್ಣ ಬಗ್ಗೆ ದುನಿಯಾ ವಿಜಯ್ ಹೇಳಿದ್ದೇನು?

ಮತ್ತೊಬ್ಬ ನಟ ದುನಿಯಾ ವಿಜಯ್ "ಆನಂದ್ ಅಪ್ಪುಗೋಳ್ ನಿರ್ಮಾಣದಲ್ಲಿ ಬರಲಿರುವ ಈ ಐತಿಹಾಸಿಕ ಚಿತ್ರ ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು ಹೊಸ ಇತಿಹಾಸ ನಿರ್ಮಿಸಲಿರುವುದು ಪಕ್ಕಾ" ಎಂದಿದ್ದಾರೆ. ಚಿತ್ರ ವೀಕ್ಷಿಸಿದ ದುನಿಯಾ ವಿಜಯ್ ಈ ಚಿತ್ರದಲ್ಲಿ ದರ್ಶನ್ ಅವರ ಅಭಿನಯ ಹಾಗೂ ಯುದ್ಧದ ದೃಶ್ಯದಲ್ಲಿ ಮೂಡಿಬಂದಿರುವ ಅವರ ವೀರಾವೇಶದ ನಟನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಿರ್ಮಿಸಲಾಗಿರುವ 'ಅದ್ದೂರಿ' ಚಿತ್ರವೆಂಬ ಪಟ್ಟವನ್ನು ರು. 32 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ 'ಸಂಗೊಳ್ಳಿ ರಾಯಣ್ಣ' ಚಿತ್ರ ಪಡೆದುಕೊಂಡಿದೆ. ರಾಜ್ಯದಾದ್ಯಂತ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ 'ಸಂಗೊಳ್ಳಿ ರಾಯಣ್ಣ' ತೆರೆಗೆ ಬರಲಿದೆ. ಈ ಚಿತ್ರದ ವಿತರಣೆ ಹಕ್ಕುಗಳನ್ನು ಎಚ್ ಡಿ ಗಂಗರಾಜು ಪಡೆದಿದ್ದು ಮೊದಲ ವಾರದಲ್ಲಿ ಟಿಕೆಟ್ ಬೆಲೆಯನ್ನು ಹೆಚ್ಚಿಸಲಾಗುವುದೆಂಬ ಮಾಹಿತಿ ನೀಡಿದ್ದಾರೆ.
ಈ ಚಿತ್ರವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೇ, ಮುಂಬೈ, ಪುಣೆ, ಗೋವಾಗಳಲ್ಲಿಯೂ ಬಿಡುಗಡೆ ಮಾಡಲಾಗುವುದು. ಆನಂದ್ ಅಪ್ಪುಗೋಳ್ ಗೆಳೆಯರು ಇದನ್ನು ಬ್ರಿಟನ್, ಅಮೆರಿಕಾ ಹಾಗೂ ಆಸ್ಟ್ರೇಲಿಯಾಗಳಲ್ಲೂ ಕೂಡ ಬಿಡುಗಡೆ ಮಾಡಲಿದ್ದಾರೆ. ದರ್ಶನ್, ನಿಖಿತಾ, ಜಯಪ್ರದಾ, ಶಶಿಕುಮಾರ್, ಶ್ರೀನಿವಾಸ ಮೂರ್ತಿ, ಉಮಾಶ್ರೀ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ನಾಳೆ ತೆರೆಮೇಲೆ ಸಂಗೊಳ್ಳಿ ರಾಯಣ್ಣ ಅಬ್ಬರಿಸಲಿದ್ದಾನೆ. (ಒನ್ ಇಂಡಿಯಾ ಕನ್ನಡ)


Click it and Unblock the Notifications











