For Quick Alerts
  ALLOW NOTIFICATIONS  
  For Daily Alerts

  ಸಿನಿಮಾಗೆ ಬೆಲೆ ಸಿಗೋದೇ ಥಿಯೇಟರ್‌ನಲ್ಲಿ ಬಿಡುಗಡೆಯಾದಾಗ- ಸುದೀಪ್

  |

  ಕೊರೊನಾ ಲಾಕ್‌ಡೌನ್ ಕಾರಣದಿಂದ ಆರೇಳು ತಿಂಗಳು ಚಿತ್ರಮಂದಿರಗಳು ಮುಚ್ಚಿದ್ದವು. ಇದೀಗ, ಸಿನಿಮಾ ಥಿಯೇಟರ್‌ಗೆ ಅವಕಾಶ ಸಿಕ್ಕಿದರೂ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ನಡುವೆ ಹಲವು ಚಿತ್ರಗಳು ಚಿತ್ರಮಂದಿರಕ್ಕೆ ಕಾಯದೇ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡಿದ್ದಾರೆ.

  ಕಾರ್ತಿಕ್ ಜಯರಾಂ ನಟನೆಯಲ್ಲಿ ತಯಾರಾಗುತ್ತಿರುವ ಐರಾವನ್ ಸಿನಿಮಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಟ ಸುದೀಪ್ ''ಐರಾವನ್ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್ ಆಗಲಿ, ಪ್ರತಿ ಸಿನಿಮಾಗೂ ಬೆಲೆ ಸಿಗೋದೇ ಥಿಯೇಟರ್‌ನಲ್ಲಿ ಬಿಡುಗಡೆಯಾದಾಗ'' ಎಂದು ಸುದೀಪ್ ಅಭಿಪ್ರಾಯ ಪಟ್ಟಿದ್ದಾರೆ.

  ಐರಾವನ್ ಸಿನಿಮಾ ಆರಂಭಿಸಿದ ನಟ ಕಾರ್ತಿಕ್ ಜಯರಾಂಐರಾವನ್ ಸಿನಿಮಾ ಆರಂಭಿಸಿದ ನಟ ಕಾರ್ತಿಕ್ ಜಯರಾಂ

  ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕಾಗಿ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದರೂ ರಿಲೀಸ್ ಬಗ್ಗೆ ಸದ್ಯಕ್ಕೆ ಯಾವುದೇ ಅಪ್‌ಡೇಟ್ ನೀಡಿಲ್ಲ. ಬಹುಶಃ ಸಿನಿಮಾ ಥಿಯೇಟರ್‌ನಲ್ಲಿ ಶೇಕಡಾ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ ಮೇಲೆ ಬರಬಹುದು ಎಂದು ಹೇಳಲಾಗಿದೆ.

  ಇನ್ನು ಜೆಕೆ ನಟಿಸುತ್ತಿರುವ ಐರಾವನ್ ಚಿತ್ರವನ್ನು ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್‌ನಲ್ಲಿ ನಿರ್ಮಿಸುತ್ತಿದ್ದು, ರಾಮ್ಸ್ ರಂಗಾ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

  Sudeep Wish To Karthik Jayaram For Iravan Movie

  ಮಲಯಾಳಂನ ಖ್ಯಾತ ನಟಿ ಮಂಜು ವಾರಿಯರ್ ಅವರನ್ನು ಭೇಟಿಯಾಗಿದ್ದೇಕೆ ಸುದೀಪ್ ದಂಪತಿ? ಮಲಯಾಳಂನ ಖ್ಯಾತ ನಟಿ ಮಂಜು ವಾರಿಯರ್ ಅವರನ್ನು ಭೇಟಿಯಾಗಿದ್ದೇಕೆ ಸುದೀಪ್ ದಂಪತಿ?

  ಇದ್ದಕ್ಕಿದ್ದಂತೆ ಹೈದ್ರಾಬಾದ್ ಗೆ ಬಂದ ಧ್ರುವ ಸರ್ಜಾ, ನಂದಕಿಶೋರ್ | Filmibeat Kannada

  ಸಸ್ಪೆನ್ಸ್ ಥ್ರಿಲ್ಲಿಂಗ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ನೀಡುತ್ತಿದ್ದಾರೆ. ದೇವೇಂದ್ರ ಛಾಯಾಗ್ರಹಣ ಇದೆ. ಕೆ.ಎಂ.ಪ್ರಕಾಶ್ ಸಂಕಲನ ಒಳಗೊಂಡಿದೆ. ಕಾರ್ತಿಕ್ ಜಯರಾಂ ಜೊತೆ ವಿವೇಕ್, ಅದ್ವಿತಿ ಶೆಟ್ಟಿ, ಅವಿನಾಶ್, ಕೃಷ್ಣ ಹೆಬ್ಬಾರ್ ಮುಂತಾದವರ ಪ್ರಮುಖ ತಾರಾಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  English summary
  Every film deserves to be in a temple and that temple is the theater said kiccha Sudeep.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X