ಸಲ್ಮಾನ್ ಖಾನ್ ಹುಟ್ಟುಹಬ್ಬ; ದಬಾಂಗ್ ಭಾಯ್ ಗೆ ವಿಶ್ ಮಾಡಿದ ಕಿಚ್ಚ ಸುದೀಪ್
ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 55ನೇ ವಸಂತಕ್ಕೆ ಕಾಲಿಟ್ಟಿರುವ ನಟ ಸಲ್ಮಾನ್ ಖಾನ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಲ್ಮಾನ್ ಗೆ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಬಾಲಿವುಡ್ ಚಿತ್ರರಂಗದ ಗಣ್ಯರು ಮಾತ್ರವಲ್ಲದೆ ದಕ್ಷಿಣ ಭಾರತದ ಸಿನಿಮಾರಂಗದ ಗಣ್ಯರು ಸಹ ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಸಲ್ಮಾನ್ ಖಾನ್ ಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ.
ದಬಾಂಗ್-3 ಸಿನಿಮಾದಲ್ಲಿ ಸುದೀಪ್, ಸಲ್ಮಾನ್ ಖಾನ್ ಜೊತೆ ನಟಿಸಿದ್ದರು. ಮೊದಲ ಬಾರಿಗೆ ಸಲ್ಮಾನ್ ಮತ್ತು ಸುದೀಪ್ ತೆರೆಹಂಚಿಕೊಂಡಿದ್ದರು. ಸಿನಿಮಾದಿಂದ ಪ್ರಾರಂಭವಾದ ಇಬ್ಬರ ಸ್ನೇಹ ಬಾಂಧವ್ಯ ಇಂದಿಗೂ ಮುಂದುವರೆದುಕೊಂಡು ಬಂದಿದೆ.

ಬಾಲಿವುಡ್ ನ ವಿಶೇಷ ಗೆಳೆಯನಿಗೆ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. 'ಯಾವಾಗಲು ಸಂತೋಷವಾಗಿರಿ ಸಲ್ಮಾನ್ ಖಾನ್ ಸರ್, ಅಧ್ಬುತವಾದ ವರ್ಷ ನಿಮ್ಮದಾಗಲಿ.ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದಾರೆ. ಕಿಚ್ಚನ ಅಭಿಮಾನಿಗಳು ಸಲ್ಮಾನ್ ಖಾನ್ ಗೆ ಶುಭಾಶಯ ತಿಳಿಸುತ್ತಿದ್ದಾರೆ.
ಅಂದಹಾಗೆ ಸಲ್ಮಾನ್ ಖಾನ್ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಪ್ರತಿವರ್ಷ ಸಲ್ಮಾನ್ ಖಾನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಬ್ಬದಂತೆ ಆಚರಣೆ ಮಾಡುತ್ತಿದ್ದರು. ಸಲ್ಮಾನ್ ಖಾನ್ ಗ್ಯಾಲಕ್ಸಿ ಮನೆ ಮುಂದೆ ಜನಸಾಗರವೇ ಹರಿದುಬರುತ್ತಿತ್ತು. ಆದರೆ ಈ ಬಾರಿ ಎಲ್ಲಾ ಆಚರಣೆ, ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಕೊರೊನಾ ಕಾರಣದಿಂದ ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಯಾರು ಮನೆಯ ಮುಂದೆ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.


Click it and Unblock the Notifications











