For Quick Alerts
  ALLOW NOTIFICATIONS  
  For Daily Alerts

  'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ ಎಂದೆಂದಿಗೂ ನನ್ನ ಉಸಿರು'- ಕಿಚ್ಚ ಸುದೀಪ್

  |

  ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಜೇತರನ್ನು ಪ್ರಕಟಿಸಲಾಗಿದೆ.

  'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ' ವಿಷಯದಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ನಟ ಸುದೀಪ್ ಶುಭ ಹಾರೈಸಿದ್ದಾರೆ.

  ವರಲಕ್ಷ್ಮಿ ಶರತ್‌ಕುಮಾರ್ ಪ್ರಯತ್ನಕ್ಕೆ ಶುಭಕೋರಿದ ಕಿಚ್ಚ ಸುದೀಪ್ವರಲಕ್ಷ್ಮಿ ಶರತ್‌ಕುಮಾರ್ ಪ್ರಯತ್ನಕ್ಕೆ ಶುಭಕೋರಿದ ಕಿಚ್ಚ ಸುದೀಪ್

  ''ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ 304 ಜನ ವಿದ್ಯಾರ್ಥಿಗಳಿಗೆ ಅಭಿನಂದನೆ, "ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ" ಎಂದೆಂದಿಗೂ ನನ್ನ ಉಸಿರು. #ಮೊದಲು_ಮಾನವನಾಗು'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

  ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಅಪೂರ್ವ ಕೆಎಂ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಭವ್ಯ ಕೆಬಿ ದ್ವಿತೀಯ ಬಹುಮಾನ ಪಡೆದಿದ್ದರೆ ಚಂದನ ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.

  Recommended Video

  ಮುನಿರತ್ನ ಈ ದೊಡ್ಡ ಗುಣಕ್ಕೆ ನಾನು ಅವರ ಬೆಂಬಲಕ್ಕೆ ನಿಂತಿದ್ದೇನೆ | Filmibeat Kannada

  ಪ್ರಥಮ ಬಹುಮಾನಕ್ಕೆ 20 ಸಾವಿರ ನಗದು, ಎರಡನೇ ಬಹುಮಾನಕ್ಕೆ 15 ಸಾವಿರ ನಗದು ಹಾಗೂ ಮೂರನೇ ಬಹುಮಾನಕ್ಕೆ 10 ಸಾವಿರ ನಗದು ನೀಡಲಾಗುತ್ತದೆ. ಒಟ್ಟು ಈ ಸ್ಪರ್ಧೆಯಲ್ಲಿ 304 ಜನರು ಭಾಗವಹಿಸಿದ್ದರು.

  English summary
  Kannada Actor Sudeep wishes to winners of the State Level Essay Competition hosted by Kichcha Sudeep Charitable Society.
  Friday, October 30, 2020, 9:48
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X