ಪ್ರಧಾನಿಗೆ ಮದುವೆಯ ಮೊದಲ ಆಮಂತ್ರಣ ನೀಡಿದ ಅಭಿಷೇಕ್: ಮರಿ ರೆಬೆಲ್‌ ಬೆನ್ನು ತಟ್ಟಿ ಟಾಸ್ಕ್ ಕೊಟ್ಟ ಮೋದಿ

ಮರಿ ರೆಬೆಲ್‌ಸ್ಟಾರ್ ಅಭಿಷೇಕ್ ಅಂಬಿರೀಶ್ ತಾಯಿ ಸುಮಲತಾ ಜೊತೆ ತೆರಳಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನು ಇಂದು (ಏಪ್ರಿಲ್ 5) ನರೇಂದ್ರ ಮೋದಿಗೆ ನೀಡಿ ಆಹ್ವಾನ ನೀಡಿ ಬಂದಿದ್ದಾರೆ.

ಅಭಿಷೇಕ್ ಅಂಬರೀಶ್ ತನ್ನ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹೀಗಾಗಿ ಕೆಲವು ದಿನಗಳಿಂದಲೇ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈಗ ಗಣ್ಯರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲು ಆರಂಭ ಮಾಡಿದ್ದಾರೆ.

Sumalatha Ambareesh Invites PM Narendra Modi to Abishek Ambareesh Wedding

ಪ್ರಧಾನಿ ನರೇಂದ್ರ ಮೋದಿಗೆ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನ ನೀಡಲಾಗಿದೆ. ಮೋದಿ ಕೂಡ ಬಿಡುವು ಮಾಡಿಕೊಂಡು ಮಂಡ್ಯ ಸಂಸದೆ ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್ ಅವನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ. ಇದೇ ಫೋಟೊಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಅಭಿಷೇಕ್‌ಗೆ ಮೋದಿಯಿಂದ ಹೊಸ ಟಾಸ್ಕ್

ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಸಂಸದೆ ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್‌ ಕೆಲ ಕಾಲ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದಾರೆ. ಅಭಿಷೇಕ್‌ಗೆ ರಾಜಕೀಯಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಜೊತೆ ಹಳೇ ಮೈಸೂರು ಭಾಗದಲ್ಲಿ ಸಕ್ರಿಯರಾಗುವಂತೆ ಸಲಹೆ ನೀಡಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ.

ಇಷ್ಟೇ ಅಲ್ಲದೆ ಅಭಿಷೇಕ್ ಅಂಬರೀಶ್ ಮದುವೆಗೆ ಬರುವುದಾಗಿ ಮೋದಿ ಭರವಸೆ ನೀಡಿದ್ದಾರೆ ಅಂತಾನೂ ಅಭಿಷೇಕ್ ಆಪ್ತರು ಫಿಲ್ಮಿಬೀಟ್‌ಗೆ ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ, ಅಭಿಷೇಕ್ ಅಂಬರೀಶ್ ಮದುವೆ ಜೂನ್ 9 ಹಾಗೂ 10 ರಂದು ಅದ್ಧೂರಿಯಾಗಿ ನೆರವೇರಲಿದೆ.

Sumalatha Ambareesh Invites PM Narendra Modi to Abishek Ambareesh Wedding

ಅವಿವಾ ಬಿದ್ದಪ್ಪ ಜೊತೆ ವಿವಾಹ

ಇತ್ತೀಚೆಗೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದರು. ಇದಕ್ಕೂ ಮುನ್ನ ಅಭಿಷೇಕ್ ಅಂಬರೀಶ್ ಕೂಡ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಗುಲ್ಲೆದ್ದಿತ್ತು. ಆದರೆ, ಬಿಜೆಪಿಗೆ ಬೆಂಬಲ ಘೋಷಿಸುವ ಸಂದರ್ಭದಲ್ಲಿಯೇ "ನಾನು ರಾಜಕೀಯದಲ್ಲಿ ಇರುವಾಗ ಅಭಿಷೇಕ್ ಪಾಲಿಟಿಕ್ಸ್‌ಗೆ ಎಂಟ್ರಿ ಕೊಡುವುದಿಲ್ಲ ಎಂದು ಸುಮಂತಾ ಅಂಬರೀಶ್ ಹೇಳಿದ್ದರು.

ಅಭಿಷೇಕ್ ಅಂಬರೀಶ್ ಗೆಳತಿ ಅವಿವಾ ಬಿದ್ದಪ್ಪ ಅವರೊಂದಿಗೆ ಕಳೆದ ವರ್ಷ ಡಿಸೆಂಬರ್ 11ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕೇವಲ ಆಪ್ತರು ಹಾಗೂ ಚಿತ್ರರಂಗದ ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಈಗ ಮದುವೆಗೆ ತಯಾರಿ ನಡೆಯುತ್ತಿದೆ.

ಇತ್ತೀಚೆಗೆಷ್ಟೇ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಮುಗಿಸಿದ್ದಾರೆ. ದುನಿಯಾ ಸೂರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಇತ್ತೀಚೆಗಷ್ಟೇ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಅಭಿಷೇಕ್ ಅಂಬರೀಶ್ ಹಿಂದಿನ ಸಿನಿಮಾಗಿಂತ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆಯಾಗಲಿದೆ.

More from Filmibeat

English summary
Sumalatha Ambareesh Invites PM Narendra Modi to Abishek Ambareesh Wedding, know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X