twitter
    For Quick Alerts
    ALLOW NOTIFICATIONS  
    For Daily Alerts

    ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದೆ ಸುಮಲತಾ

    |

    Recommended Video

    ಪ್ರಮಾಣವಚನ ಸ್ವೀಕರಿಸಿದ ನಂತರ ಸುಮಲತಾ ಅಂಬರೀಶ್ ಹೇಳಿದ್ದೇನು?

    ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಸೇರಿದಂತೆ ಅನೇಕ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದರು.

    ಇದೇ ವೇಳೆ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಚೊಚ್ಚಲ ಬಾರಿಗೆ ಲೋಕಸಭೆ ಪ್ರವೇಶ ಮಾಡಿದ ಸುಮಲತಾ ಅಂಬರೀಶ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಪಡೆದುಕೊಂಡರು.

    ಪ.ಬಂಗಾಳದ ಬಿಜೆಪಿ ಸಂಸದನ ಪ್ರಮಾಣವಚನದ ವೇಳೆ ಮೊಳಗಿದ ಜೈಶ್ರೀರಾಂ ಘೋಷಣೆ

    ಕರ್ನಾಟಕದ ಇತಿಹಾಸದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಮಲತಾ ಅಂಬರೀಶ್ ಅವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.

    Sumalatha ambarish takes oath in parliment

    ತೀರಾ ರೋಚಕವಾಗಿದ್ದ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ವಿರುದ್ಧ ಸುಮಲತಾ ಸ್ಪರ್ಧಿಸಿದ್ದರು. ಸುಮಾರು 1.2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು.

    ಪಂಚೆ, ಶಲ್ಯ ತೊಟ್ಟು ಸಂಸತ್ ಪ್ರವೇಶಿಸಿದ ತೇಜಸ್ವಿ ಸೂರ್ಯ

    ಸುಮಲತಾ ಅವರ ಪತಿ ಕನ್ನಡ ನಟ ಅಂಬರೀಶ್ ಅವರು ಕೂಡ ಈ ಹಿಂದೆ ಮಂಡ್ಯ ಲೋಕಸಭೆ ಅಖಾಡದಲ್ಲಿ ಗೆದ್ದು ಸಂಸತ್ ಭವನ ಪ್ರವೇಶಿಸಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ, ಅವರ ಪತ್ನಿ ಸುಮಲತಾ ಮೊದಲ ಸಲ ಲೋಕಸಭೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

    English summary
    Sumalatha Ambareesh, who won as an independent in mandya has takes oath in parliament today. (june 17th)
    Monday, June 17, 2019, 18:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X