twitter
    For Quick Alerts
    ALLOW NOTIFICATIONS  
    For Daily Alerts

    ಕೊರೊನಾ ಸೋಂಕಿತರನ್ನ ಅಪರಾಧಿಗಳಂತೆ ಕಾಣುವುದು, ನಿಂದನೆ ಮಾಡೋದು ಸರಿಯಲ್ಲ: ಸುಮಲತಾ ಅಂಬರೀಶ್

    |

    ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಗೆ ಕೊರೊನಾ ಪಾಸಿಟಿವ್ ಬಂದಿದ್ದು ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿರುವ ಸುಮಲತಾ ಗುಣಮುಖರಾಗಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಗುಣಮುಖಳಾಗಿದ್ದೇನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಪರೀಕ್ಷೆಯ ಬಳಿಕವೇ ತಿಳಿಯುವುದು ಎಂದು ಹೇಳಿದ್ದಾರೆ.

    Recommended Video

    ತಾಯಿಯನ್ನು ಕಳೆದುಕೊಂಡ ಜೋಗಿ ಪ್ರೇಮ್! | Filmibeat Kannada

    ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಮಂಡ್ಯ ಸಂಸದೆ ಕರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ ಎಂದಿದ್ದಾರೆ.

    "ನಾನು ಕೊರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ" ಎಂದು ಹೇಳಿದ್ದಾರೆ.

    "ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ ಧರಿಸುವುದನ್ನ ಮರಿಯಬೇಡಿ." ಎಂದು ಸಾಮಾಜಿಕ ಜಾಲತಾಣಲ್ಲಿ ಬರೆದುಕೊಂಡಿದ್ದಾರೆ.

    Sumalatha Reaction About Her Health Situation After Tested Positive For Corona

    ಜುಲೈ 7ರಂದು ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. "ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೆ" ಎಂದು ಸುಮಲತಾ ಫೇಸ್ ಬುಕ್ ಮೂಲಕ ತಿಳಿಸಿದ್ದರು. ಸುಮಲತಾ ಬೇಗ ಗುಣಮುಖರಾಗಲಿದೆ ಎಂದು ಅಭಿಮಾನಿಗಳು ಮತ್ತು ಕ್ಷೇತ್ರ ಜನತೆ ಪ್ರಾರ್ಥನೆ ಮಾಡುತ್ತಿದ್ದಾರೆ.

    English summary
    Sumalatha Ambareesh reaction about her health situation after tested positive for corona.
    Saturday, July 18, 2020, 9:37
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X