For Quick Alerts
  ALLOW NOTIFICATIONS  
  For Daily Alerts

  ಉಪೇಂದ್ರ 'ಕಬ್ಜ' ಚಿತ್ರದಲ್ಲಿ ವಿಶೇಷ ವ್ಯಕ್ತಿ: ಫಸ್ಟ್ ಲುಕ್ ಬಿಡುಗಡೆ

  |

  ಕೆಜಿಎಫ್ ಆದ್ಮೇಲೆ ಕನ್ನಡದಲ್ಲಿ ಅಂತಹದ್ದೇ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸುತ್ತಿದ್ದು, ಆರ್ ಚಂದ್ರು ನಿರ್ದೇಶಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಭಾರತದ ಪ್ರಮುಖ ಭಾಷೆಯಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

  ಇದೀಗ, ಕಬ್ಜ ಚಿತ್ರಕ್ಕೆ ಮತ್ತೊಬ್ಬ ಕಲಾವಿದನ ಎಂಟ್ರಿಯಾಗಿರುವ ಸುದ್ದಿ ಹೊರಬಿದ್ದಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಕಬ್ಜ ಸಿನಿಮಾದಲ್ಲಿ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ. ಆರ್ ಚಂದ್ರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

  'ಕಬ್ಜ' ಚಿತ್ರದ ನಾಯಕಿ ಬಗ್ಗೆ ಸ್ಪಷ್ಟನೆ ನೀಡಿದ ನಿರ್ದೇಶಕ ಆರ್ ಚಂದ್ರು'ಕಬ್ಜ' ಚಿತ್ರದ ನಾಯಕಿ ಬಗ್ಗೆ ಸ್ಪಷ್ಟನೆ ನೀಡಿದ ನಿರ್ದೇಶಕ ಆರ್ ಚಂದ್ರು

  ಇಂದು (ಆಗಸ್ಟ್ 19) ಸುನಿಲ್ ಪುರಾಣಿಕ್ ಅವರ ಹುಟ್ಟುಹಬ್ಬ. ಈ ವಿಶೇಷ ದಿನದಲ್ಲಿ ಕಬ್ಜ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿರುವ ಚಂದ್ರು, 'ಕಬ್ಜ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳು' ಎಂದು ಪೋಸ್ಟ್ ಹಾಕಿದ್ದಾರೆ. ಆದರೆ ಸುನೀಲ್ ಪುರಾಣಿಕ್ ಅವರ ಯಾವ ಪಾತ್ರ, ಪಾತ್ರದ ಹೆಸರೇನು ಎನ್ನುವ ವಿಷಯ ಗೌಪ್ಯವಾಗಿದೆ.

  1980ರ ದಶಕದ ಅಂಡರ್‌ವರ್ಲ್ಡ್ ಸುತ್ತ ಕಬ್ಜ ಸಿನಿಮಾದ ಕಥೆ ಮಾಡಲಾಗಿದ್ದು, ಈಗಾಗಲೇ ಸಾಕಷ್ಟು ಚಿತ್ರೀಕರಣ ನಡೆದಿದೆ. ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಬೆಂಗಳೂರಿನಲ್ಲಿ ದುಬಾರಿ ಸೆಟ್ ಹಾಕಲಾಗುತ್ತಿದೆ. ಶೀಘ್ರದಲ್ಲಿಯೇ ಸಿಲಿಕಾನ್ ಸಿಟಿಯಲ್ಲಿ ಕಬ್ಜ ಶೂಟಿಂಗ್ ಮತ್ತೆ ಆರಂಭವಾಗಲಿದೆ.

  ಕಿಚ್ಚ ಸುದೀಪ್ ಸಹ ಕಬ್ಜ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಭಾರ್ಗವ್ ಬಕ್ಷಿ ಎಂಬ ಪಾತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಫಸ್ಟ್ ಲುಕ್ ಪೋಸ್ಟರ್ ಸಖತ್ ಸದ್ದು ಮಾಡಿತ್ತು. ಇವರ ಜೊತೆ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್, ಡ್ಯಾನಿಶ್ ಅಖ್ತರ್ ಸೈಫಿ, ಅನೂಪ್ ರೇವಣ್ಣ ಸಹ ತಾರಬಳಗದಲ್ಲಿದ್ದಾರೆ. ಇನ್ನು ನಾಯಕಿ ಅಂತಿಮವಾಗಿಲ್ಲ. ಕಾಜಲ್ ಅಗರ್‌ವಾಲ್, ಆಶಾ ಭಟ್ ಹೆಸರು ಕೇಳಿ ಬಂತು. ಆದರೆ, ಪಕ್ಕಾ ಆಗಲಿಲ್ಲ.

  Sunil Puranik Part in Upendra Starrer Kabzaa

  ಕೆಜಿಎಫ್ ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರು ಕಬ್ಜ ಚಿತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಕುಮಾರ್ ಕಲಾ ನಿರ್ದೇಶಿಸಲಿದ್ದಾರೆ. ರವಿ ಬಸ್ರೂರು ಸಂಗೀತವಿದೆ. ಎಂಟಿಬಿ ನಾಗರಾಜ್ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣವಿದೆ.

  English summary
  Karnataka Chalanachitra academy president Sunil Puranik acting in Upendra starrer Kabza movie. here is the first look poster of him.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X