ಸನ್ನಿ ಲಿಯೋನ್ ಬೆಂಗಳೂರು ಕಾರ್ಯಕ್ರಮಕ್ಕೆ ಷರತ್ತು ವಿಧಿಸಿದ ಪೊಲೀಸರು

ಮಾದಕ ತಾರೆ ಸನ್ನಿ ಲಿಯೋನ್ ಬೆಂಗಳೂರಿಗೆ ಬರುತ್ತಿರುವ ಹಿನ್ನೆಲೆ ಕೆಲವು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡಲು ಸಜ್ಜಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡುವುದು ಅನುಮಾನ ಎನ್ನಲಾಗಿತ್ತಾದರೂ, ಷರತ್ತು ವಿಧಿಸಿ ಅನುಮತಿ ನೀಡಿದ್ದಾರೆ.

ನವೆಂಬರ್ 3 ರಂದು ಬೆಂಗಳೂರಿನ ಮಾನ್ಯಾತಾ ಟೆಕ್ ಪಾರ್ಕ್ ನ ವೈಟ್ ಆರ್ಕೆಡ್ ನಲ್ಲಿ ಸನ್ನಿ ಲಿಯೋನ್ ಶೋ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚು ಟಿಕೆಟ್ ಮಾರಾಟವಾಗುವ ನಿರೀಕ್ಷೆ ಇದೆ. ಮತ್ತು ಜನರು ಹೆಚ್ಚು ಭಾಗವಹಿಸುವ ಸಾಧ್ಯತೆಯೂ ಇದೆ. ಹೀಗಾಗಿ ಭದ್ರತೆ ಕೋರಿ ಆಯೋಜಕರು ಪೊಲೀಸರಿಗೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಅನುಮತಿ ಸಿಕ್ಕಿದ್ದು, ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಸ್ಥಳದಲ್ಲಿ ಮಧ್ಯ ಮಾರಾಟ ಮಾಡಬಾರದು ಎಂದು ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್​ ಆಯುಕ್ತ ಸೀಮಂತ್​ ಕುಮಾರ್​ ಸಿಂಗ್​ ತಿಳಿಸಿದ್ದಾರೆ.

Sunny leone granted Permission for perform in Bengaluru

ಕಳೆದ ವರ್ಷ ಸನ್ನಿ ಲಿಯೊಣ್ ಶೋ ಬೆಂಗಳೂರಿನಲ್ಲಿ ಆಯೋಜನೆ ಆಗಿತ್ತು. ಆದ್ರೆ, ಆ ಸಮಯದಲ್ಲಿ ಅನುಮತಿ ಸಿಕ್ಕಿರಲಿಲ್ಲ. ಚುನಾವಣೆ ಸಮಯವಾಗಿದ್ದರಿಂದ ಸನ್ನಿ ಕಾರ್ಯಕ್ರಮವನ್ನ ಪೊಲೀಸ್ ಇಲಾಖೆ ನಿಷೇಧ ಮಾಡಿದ್ದರು. ಈಗ ಯಾವುದೇ ಸಮಸ್ಯೆಯಿಲ್ಲ ಎಂದು ಅನುಮತಿ ನೀಡಿದ್ದಾರೆ.

ನವೆಂಬರ್ 3 ರಂದು ಈ ಕಾರ್ಯಕ್ರಮ ನಡೆಯಲಿದ್ದು, ಮೂರು ಹಾಡುಗಳಿಗೆ ಸನ್ನಿ ಲಿಯೋನ್ ಸೊಂಟ ಬಳುಕಿಸಲಿದ್ದಾಳೆ. ವಿಶೇಷ ಅಂದ್ರೆ, ಇದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ರಘುದೀಕ್ಷಿತ್ ಅವರ ಕಾರ್ಯಕ್ರಮ ಕೂಡ ಅದೇ ದಿನ ನಡೆಯಲಿದೆ. ಕಾರ್ಯಕ್ರಮದಲ್ಲಿ ರಘು ದೀಕ್ಷಿತ್ ಅವರ ಶೋ ಹೆಚ್ಚು ಕಾಲ ಇರಲಿದೆ. ಸನ್ನಿ ಕೇವಲ ಮೂರು ಹಾಡಿಗೆ ಮಾತ್ರ ಡ್ಯಾನ್ಸ್ ಮಾಡಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ಸನ್ನಿ ಲಿಯೋನ್ ಅವರ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಕನ್ನಡ ಪರ ಸಂಘಟನೆಗಳು ಮತ್ತೆ ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸನ್ನಿ ಲಿಯೋನ್ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Sunny leone granted Permission for perform in Bengaluru

ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲೂ ಸನ್ನಿ ಲಿಯೋನ್ ಅವರನ್ನ ವಿರೋಧಿಸಿ ಪ್ರತಿಭಟನೆ ಮಾಡಲು ಸಂಘಟನೆಗಳು ನಿರ್ಧರಿಸಿವೆ. ಸನ್ನಿ ಲಿಯೋನ್ ಕಾರ್ಯಕ್ರಮಗಳನ್ನ ಕರ್ನಾಟಕದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಕನ್ನಡ ಪರ ಹೋರಾಟಗಾರರು ಹೇಳುತ್ತಿದ್ದಾರೆ.

More from Filmibeat

English summary
Despite facing opposition by some Kannada outfits, actor Sunny Leone has been given permission to perform in Bengaluru on November 3.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X