ಬೆಂಗಳೂರಿನಲ್ಲಿ 'ಸನ್ನಿ ನೈಟ್ಸ್' ನಿ‍ಷೇಧದ ಬಗ್ಗೆ 'ಬೇಬಿ ಡಾಲ್' ಬೇಸರ

By Bharath Kumar

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸನ್ನಿ ನೈಟ್ಸ್ ಕಾರ್ಯಕ್ರಮ ರದ್ದುಗೊಳಿಸಲು ಬೆಂಗಳೂರು ಪೊಲೀಸರು ಸೂಚಿಸಿದ್ದಾರೆ. ಸುರಕ್ಷತೆ ಕಾರಣ ನೀಡಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎನ್ನುವುದು ಸನ್ನಿ ಲಿಯೋನ್ ಗೆ ಬೇಸರ ತರಿಸಿದೆ.

ಕಳೆದ ಒಂದು ವಾರದಿಂದ ಈ ಬೆಳವಣಿಗೆಯ ಬಗ್ಗೆ ಮಾತನಾಡದ ಸನ್ನಿ, ಈಗ ಟ್ವಿಟ್ಟರ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಸುರಕ್ಷತೆ ಕಾರಣದಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಹೀಗಾಗಿ, ನಿಮ್ಮ ಸುರಕ್ಷತೆ ನನಗೆ ಮುಖ್ಯ, ನಾನು ಸನ್ನಿನೈಟ್ಸ್ ಕಾರ್ಯಕ್ರಮಕ್ಕೆ ಬರಲ್ಲ ಎಂದು ಸನ್ನಿ ಟ್ವೀಟ್ ಮಾಡಿದ್ದಾರೆ.

sunny-leone-tweet-on-banglore-sunny-nights

''ನನಗೆ ಮತ್ತು ನನ್ನ ಹೊಸ ವರ್ಷ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಭದ್ರತೆ ಒದಗಿಸಲು ಸಾಧ್ಯವಿಲ್ಲವೆಂದು ಬೆಂಗಳೂರು ಪೋಲಿಸರು ಸಾರ್ವಜನಿಕವಾಗಿ ಹೇಳಿದ್ದಾರೆ. ನನಗೆ ಮತ್ತು ನನ್ನ ತಂಡಕ್ಕೆ ಜನರ ಸುರಕ್ಷತೆ ಮುಖ್ಯ. ಹೀಗಾಗಿ, ನಾನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊಸ ವರ್ಷ ಆಚರಿಸಿ, ದೇವರು ಒಳ್ಳೆಯದು ಮಾಡಲಿ'' ಎಂದು ಸನ್ನಿ ಟ್ವೀಟ್ ಮಾಡಿದ್ದಾರೆ.

''ಪ್ರತಿಭಟಿಸಿದ ಮತ್ತು ಬೆಂಬಲಿಸಿದ ಎಲ್ಲರೂ ನೆನಪಿಟ್ಟುಕೊಳ್ಳಿ,ನಿಮಗಾಗಿ ಬೇರೆಯವರು ಮಾತನಾಡಲು ಮತ್ತು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಡಿ. ನಿಮ್ಮ ಸ್ವಂತ ಧ್ವನಿ ಮತ್ತು ನಿಮ್ಮ ಸ್ವಂತ ಆಯ್ಕೆಗಳನ್ನು ಮಾಡಿ. ನೀವು ಯುವಕರು ಮತ್ತು ನೀವೇ ನವ ಭಾರತ! ನಾನು ನಿನ್ನನ್ನು ಪ್ರೀತಿಸುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಕ್ಯಾನ್ಸಲ್ ಮಾಡುವುದರಿಂದ 2.5 ಕೋಟಿ ನಷ್ಟವಾಗುತ್ತೆ ಎಂದು ಪ್ರಶ್ನಿಸಿ ಟೈಮ್ಸ್ ಕ್ರಿಯೇಷನ್ಸ್ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇಷ್ಟೆಲ್ಲಾ ಆದ ಮೇಲೆ ಸನ್ನಿ ನೈಟ್ಸ್ ನಡೆಯುತ್ತಾ? ಅಥವಾ ಇಲ್ವಾ ಎಂಬುದು ರಾಷ್ಟ್ರ ಮಟ್ಟದಲ್ಲಿ ಕುತೂಹಲ ಹುಟ್ಟುಹಾಕಿದೆ.

More from Filmibeat

English summary
Bollywood Actress sunny leone has taken her twitter account to express their displeasure againt Bangalore Police and Protesters. ಬೆಂಗಳೂರು ಪೊಲೀಸರು ಮತ್ತು ಪ್ರತಿಭಟನಾಕಾರರ ವಿರುದ್ಧ ಬಾಲಿವುಡ್ ನಟಿ ಸನ್ನಿ ಲಿಯೋನ್ ಬೇಸರ ವ್ಯಕ್ತಪಡಿಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X