Breaking: ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌; ದರ್ಶನ್ & ಗ್ಯಾಂಗ್ ರಿಲೀಫ್

Supreme Court Notice to Darshan:ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಏಳು ಮಂದಿಗೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ಮೆರಿಟ್ ಆಧಾರದ ಮೇಲೆ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ನೋಟೀಸ್ ನೀಡಿ, ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಧೀಶರು ದರ್ಶ್ನ ಸೇರಿದಂತೆ ಏಳು ಮಂದಿಗೆ ನೋಟೀಸ್ ನೀಡಿದೆ.

Supreme Court gave notice to Darshan and 7 accused in the Renukaswamy case

ಹೈಕೋರ್ಟ್‌ನಲ್ಲಿ ಎರಡನೇ ಆರೋಪಿ ದರ್ಶನ್, ಮೊದಲನೇ ಆರೋಪಿ ಪವಿತ್ರಾ ಗೌಡ ಸೇರಿದಂತೆ ಜಗದೀಶ್, ಅನುಕುಮಾರ್, ನಾಗರಾಜ್, ಎಂ. ಲಕ್ಷ್ಮಣ್, ಪ್ರದೋಶ್‌ಗೆ ಜಾಮೀನನ್ನು ನೀಡಲಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇವರ ಪಾತ್ರ ಪ್ರಮುಖವಾಗಿದೆ ಎಂದು ಪರಿಗಣಿಸಿ ಬೆಂಗಳೂರು ಪೊಲೀಸರು ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಆದರೆ, ದರ್ಶನ್ ಹಾಗೂ ಗ್ಯಾಂಗ್‌ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಎತ್ತಿ ಹಿಡಿದಿದೆ. ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್‌ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಜಾಮೀನು ರದ್ದಾಗಿ ಮತ್ತೆ ಜೈಲು ಸೇರುವ ಆತಂಕದಲ್ಲಿ ದರ್ಶನ್ ಅಂಡ್ ಗ್ಯಾಂಗ್‌ಗೆ ನಿಟ್ಟುಸಿರು ಬಿಟ್ಟಂತೆ ಆಗಿದೆ.

ದರ್ಶನ್ ಹಾಗೂ ಏಳು ಮಂದಿಯ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ಮಾಡುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರ ಪೀಠ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ನೋಟೀಸ್ ಅನ್ನು ಜಾರಿ ಮಾಡಿದೆ.

ಇದೇ ಸಂದರ್ಭದಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ವಿಸ್ತೃತ ಆದೇಶವನ್ನು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಮೆರಿಟ್ ಆಧಾರದ ಮೇಲೆ ಕೋರ್ಟ್ ಆದೇಶ ನೀಡಿದ್ದರಿಂದ ಅರ್ಜಿಯ ವಿಚಾರಣೆಗಾಗಿ ಆರೋಪಿಗಳ ವಾದವನ್ನು ಆಲಿಸಬೇಕಾಗುತ್ತೆ. ಈ ಕಾರಣಕ್ಕೆ ಆರೋಪಿಗಳಿಗೆ ನೋಟೀಸ್ ಅನ್ನು ಜಾರಿ ಮಾಡಲಾಗಿದೆ. ಹಾಗೇ ವಿಚಾರಣೆಯನ್ನು ಮುಂದೂಡುತ್ತಿರುವುಗಾಗಿ ನ್ಯಾಯಾಮೂರ್ತಿಗಳು ಆದೇಶವನ್ನು ಹೊರಡಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದರೆ, ಪವಿತ್ರಾ ಗೌಡ ಮೊದಲನೇ ಆರೋಪಿ, ಜಗದೀಶ್ ಆರನೇ ಆರೋಪಿ, ಅನುಕುಮಾರ್ ಏಳನೇ ಆರೋಪಿ, ಆರ್ ನಾಗರಾಜ್ 11ನೇ ಆರೋಪಿ, ಎಂ ಲಕ್ಷ್ಮಣ್ 12ನೇ ಆರೋಪಿ ಹಾಗೂ 14ನೇ ಆರೋಪಿ ಪ್ರದೋಶ್ ಜಾಮೀನು ಅನ್ನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಸದ್ಯ ದರ್ಶನ್ ಇನ್ನೂ ಆನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೈಕೋರ್ಟ್‌ನಿಂದ ಜಾಮೀನು ಸಿಕ್ಕಿದ ಬಳಿಕ 'ಡೆವಿಲ್' ಸಿನಿಮಾದ ಶೂಟಿಂಗ್‌ಗೆ ಹೋಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಹಾಗೇ ಸಂಕ್ರಾಂತಿ ಬಳಿಕ ಶಸ್ತ್ರ ಚಿಕಿತ್ಸೆಗೆ ಒಳಗಾಗಬಹುದು ಎಂದು ವರದಿಗಳಾಗಿದ್ದವು. ಆದರೆ, ಇನ್ನು ಶಸ್ತ್ರ ಚಿಕಿತ್ಸೆಗೆ ಮುಂದಾಗಿಲ್ಲ. ಡೆವಿಲ್ ಸಿನಿಮಾ ಶೂಟಿಂಗ್‌ ಕೂಡ ಶುರು ಮಾಡಿಲ್ಲ. ಈ ಮಧ್ಯೆ ಪೊಲೀಸರು ಸುಪ್ರೀಂ ಕೋರ್ಟ್‌ ಹೊರ ಹೋಗಿರುವುದರಿಂದ ದರ್ಶನ್ ಹಾಗೂ ಅವರ ಸಂಗಡಿಗರಲ್ಲಿ ಆತಂಕ ಮನೆ ಮಾಡಿತ್ತು. ಈಗ ಸುಪ್ರೀಂ ಕೋರ್ಟ್ ಜಾಮೀನು ಆದೇಶವನ್ನು ಎತ್ತಿ ಹಿಡಿದಿದ್ದರಿಂದ ರಿಲೀಫ್ ಸಿಕ್ಕಂತಾಗಿದೆ.

More from Filmibeat

English summary
Supreme Court gave notice to Darshan and 7 accused in the Renukaswamy case;
Read more about: darshan notice supreme court
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X