Just In
Don't Miss!
- News
ಮಮತಾ ಭಾಷಣದ ಮಧ್ಯೆ ಜೈ ಶ್ರೀರಾಮ ಘೋಷಣೆ; ಕೋಪದಲ್ಲೇ ಭಾಷಣ ಆರಂಭಿಸಿದ ದೀದಿ
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Sports
ಟೀಮ್ ಇಂಡಿಯಾದ 6 ಆಟಗಾರರಿಗೆ ಆನಂದ್ ಮಹೀಂದ್ರರಿಂದ ಭರ್ಜರಿ ಗಿಫ್ಟ್!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಂಡ್ಯದಲ್ಲಿ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಆರಂಭಿಸಲಿರುವ ಅಭಿಷೇಕ್
'ಅಮರ್' ಸಿನಿಮಾದ ನಂತರ ಎರಡನೇ ಚಿತ್ರದ ಶೂಟಿಂಗ್ ಆರಂಭಿಸಲು ಎಲ್ಲ ತಯಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಲಾಕ್‌ಡೌನ್ ಆಯ್ತು. ದುನಿಯಾ ಸೂರಿ ಜೊತೆ ಅಭಿಷೇಕ್ ಎರಡನೇ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು.
ಇದೀಗ ಚಿತ್ರೀಕರಣ ಆರಂಭಿಸಲು ದಿನಾಂಕ ನಿಗದಿಯಾಗಿದೆ. ಜನವರಿ 15 ರಿಂದ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ಶುರು ಮಾಡಲಾಗುತ್ತಿದೆ. ಮೊದಲ ಶೆಡ್ಯೂಲ್‌ನಲ್ಲಿ ಚಿತ್ರದ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
'ನಿಮ್ಮನ್ನು ನನ್ನ ಅಣ್ಣನಾಗಿ ಪಡೆದಿರುವುದು ನನ್ನ ಸೌಭಾಗ್ಯ': ದರ್ಶನ್‌ಗೆ ಅಭಿಷೇಕ್ ಹೀಗೆ ಹೇಳಿದ್ದೇಕೆ?
ಮಂಡ್ಯದಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಸುಮಾರು 12 ದಿನಗಳ ಕಾಲ ಬ್ಯಾಡ್ ಮ್ಯಾನರ್ಸ್ ತಂಡ ಸಕ್ಕರೆನಾಡಿನಲ್ಲಿ ಕೆಲಸ ಮಾಡಲಿದೆ. ಅದಕ್ಕಾಗಿ ಅಗತ್ಯ ಶೂಟಿಂಗ್ ಲೋಕೇಶನ್‌ಗಳನ್ನು ಗುರುತಿಸಿದ್ದಾರೆ.
ಸಾಹಸ ನಿರ್ದೇಶಕ ರವಿವರ್ಮ ಅವರ ಸಾರಥ್ಯದಲ್ಲಿ ಆಕ್ಷನ್ ದೃಶ್ಯಗಳ ಶೂಟಿಂಗ್ ನಡೆಯಲಿದ್ದು, ಹಿರಿಯ ನಟಿ ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ಹೆಚ್ಚು ಜೂನಿಯರ್ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಅಮರ್ ಸಿನಿಮಾ ಬಳಿಕ ಅಭಿಷೇಕ್ ಮಾಡುತ್ತಿರುವ ಎರಡನೇ ಸಿನಿಮಾ ಎಂಬ ಕಾರಣಕ್ಕೆ ಹಾಗೂ ಸುಕ್ಕು ಸೂರಿ ನಿರ್ದೇಶನ ಮಾಡುತ್ತಿರುವ ಕಾರಣಕ್ಕೆ ಈ ಪ್ರಾಜೆಕ್ಟ್ ಭಾರಿ ನಿರೀಕ್ಷೆ ಮೂಡಿಸಿದೆ.
ಈ ಚಿತ್ರಕ್ಕಾಗಿ ಅಭಿಷೇಕ್ ಅಂಬರೀಶ್ ಪೂರ್ವ ತಯಾರಿ ನಡೆಸಿದ್ದಾರೆ. ಬಾಡಿ ಟ್ರಾನ್ಸ್‌ಫರ್‌ಮೇಶನ್‌ನ ಸಹ ಮಾಡಲಿದ್ದಾರೆ ಎನ್ನಲಾಗಿದೆ. ಸುಧೀರ್ ಕೆಎಂ ಈ ಚಿತ್ರ ನಿರ್ಮಾಣ ಮಾಡಲಿದ್ದು, ಚರಣ್ ರಾಜ್ ಸಂಗೀತ ಇರಲಿದೆ. ಸದ್ಯಕ್ಕೆ ಹೀರೋಯಿನ್ ಯಾರೆಂದು ಫಿಕ್ಸ್ ಆಗಿಲ್ಲ.